ಈಗಿನ ಸುದ್ದಿ

ಗ್ಯಾಂಗ್‌ರೇಪ್: ಆರೋಪಿಗಳು ಬಾಲಾಪರಾಧಿಗಳಲ್ಲ

Published On :

ಮುಂಬೈ: ಪತ್ರಿಕಾ ಛಾಯಾಗ್ರಾಹಕಿಯನ್ನು ಸಾಮೂಹಿಕ ಅತ್ಯಾಚಾರಗೈದ ಪ್ರಕರಣದ ಆರೋಪಿಗಳಲ್ಲಿ ಯಾರೂ ಬಾಲಾಪರಾಧಿಗಳಿಲ್ಲ ಎಂದು ಮುಂಬೈ ಪೊಲೀಸ್ ಕಮಿಷನರ್ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.

ಆರೋಪಿಗಳಲ್ಲಿ ಯಾರೂ ಅಪ್ರಾಪ್ತರಲ್ಲ. ಇವರೆಲ್ಲರೂ ಅವಿದ್ಯಾವಂತರಾಗಿದ್ದು, ನಿರುದ್ಯೋಗಿಗಳಾಗಿದ್ದಾರೆ. ಇವರೆಲ್ಲರೂ ಮುಂಬೈನಲ್ಲೇ ಹುಟ್ಟಿ ಬೆಳೆದಿದ್ದು, ಚಿಕ್ಕಂದಿನಿಂದಲೇ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದರು ಎಂದು ಸಿಂಗ್ ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಕೆಲವರು ಬಾಲಾಪರಾಧಿಗಳು ಎಂದು ಅವರ ಕುಟುಂಬ ವಾದಿಸಿತ್ತು. ಆದರೆ ಯಾರೂ ಬಾಲಾಪರರಾಧಿಗಳಿಲ್ಲ. ಅಗತ್ಯವಿದ್ದರೆ ವೈದ್ಯಕೀಯ ಪರೀಕ್ಷೆಗೊಳಪಡಿಸುವ ಮೂಲಕ ಆರೋಪಿಗಳ ವಯಸ್ಸು ಎಷ್ಟೆಂದು ಸಾಬೀತು ಪಡಿಸಲು ನಾವು ಸಿದ್ಧರಿದ್ದೇವೆ.

ಪ್ರಸ್ತುತ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆರೋಪ ಪಟ್ಟಿ ತಯಾರಿಸುವುದು ದೊಡ್ಡ ಸಾಹಸ ಆಗಿತ್ತು. ಆದಾಗ್ಯೂ, ಈ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮಾಡಲು ಯತ್ನಿಸುತ್ತಿದ್ದೇವೆ.

ಅದೇ ವೇಳೆ ಅತ್ಯಾಚಾರವೆಸಗುತ್ತಿರುವುದನ್ನು ಸೆರೆ ಹಿಡಿದ ಮೊಬೈಲ್ ಫೋನ್‌ನ್ನು ಕೂಡಾ ನಾವು ಪತ್ತೆ ಹಚ್ಚಿದ್ದೇವೆ ಎಂದು ಸಿಂಗ್ ಹೇಳಿದ್ದಾರೆ.

ಈ ಬಗ್ಗೆ ಎಲ್ಲ ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಮೊಬೈಲ್ ಫೋನ್‌ನಲ್ಲಿ ಅತ್ಯಾಚಾರ ನಡೆಸುತ್ತಿದ್ದ ಒಂದೇ ಒಂದು ಫೋಟೋವನ್ನು ಕ್ಲಿಕ್ ಮಾಡಿದ್ದು, ಆ ಫೋಟೋವನ್ನು ಕೂಡಾ ಪತ್ತೆ ಹಚ್ಚಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.