ಈಗಿನ ಸುದ್ದಿ

ಪರಿಷತ್ ಫಲಿತಾಂಶ: ಮೈಸೂರು, ಧಾರವಾಡದಲ್ಲಿ 'ಕೈ' ಕೇಕೆ, ದುರ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು

ಪರಿಷತ್ ಫಲಿತಾಂಶ: ಮೈಸೂರು, ಧಾರವಾಡದಲ್ಲಿ 'ಕೈ' ಕೇಕೆ, ದುರ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು
ರಘು ಆಚಾರ್ಯ- ಧರ್ಮಸೇನಾ
Published On :

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯ ಮೂರು ಸ್ಥಾನಗಳ ಫಲಿತಾಂಶ ಸೋಮವಾರ ಹೊರ ಬಿದ್ದಿದ್ದು, ಪರಿಷತ್ ಚುನಾವಣೆಯಲ್ಲೂ ದೋಸ್ತಿ ರಾಜಕಾರಣಕ್ಕೆ ಬಾರಿ ಹಿನ್ನಡೆಯಾಗಿದೆ. ಮೂರು ಸ್ಥಾನಗಳ ಪೈಕಿ ಎರಡು ಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ಇದರಿಂದ ಚುನಾವಣಾ ಮೈತ್ರಿ ಮಾಡಿಕೊಂಡಿದ್ದ ಕೆಜೆಪಿ-ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

ಮೈಸೂರು-ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧರ್ಮಸೇನಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದ ಅವಿಭಜಿತ ಧಾರವಾಡ ಜಿಲ್ಲೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಶೆಟ್ಟರ್ ಅವರ ಸಹೋದರ, ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ್ ಛಬ್ಬಿ ಜಯಭೇರಿ ಬಾರಿಸಿದ್ದಾರೆ.

ಚಿತ್ರದುರ್ಗದಲ್ಲಿ ಪಕ್ಷೇತರ ಅಭ್ಯರ್ಥಿ ರಘ ಆಚಾರ್ಯ ಅವರು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ಈ ಮುಂಚೆ ಈ ಮೂರು ಸ್ಥಾನಗಳು ಬಿಜೆಪಿಯದ್ದಾಗಿದ್ದವು. ಈ ಪೈಕಿ ಎರಡು ಸ್ಥಾನಗಳನ್ನು ಬಿಜೆಪಿ ಹಾಗೂ ಒಂದು ಸ್ಥಾನವನ್ನು ಕೆಜೆಪಿ ಹಂಚಿಕೊಡು ಗೆಲುವು ಸಾಧಿಸುವ ಪ್ರಯತ್ನ ವಿಫಲವಾಗಿದೆ. ಕಾಂಗ್ರೆಸ್‌ನ್ನು ಸೋಲಿಸಬೇಕು ಎಂಬ ಕಾರಣಕ್ಕೆ ಜೆಡಿಎಸ್ ಕೂಡ ಈ ಪ್ರಯತ್ನಕ್ಕೆ ಕೈಜೊಡಿಸಿತ್ತು. ಆದರೆ ಅದೂ ಫಲ ನೀಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.