ಈಗಿನ ಸುದ್ದಿ

ಅನಿರ್ದಿಷ್ಟಾವಧಿ ಉಪವಾಸ: ವೈದ್ಯಕೀಯ ಸಹಾಯ ನಿರಾಕರಿಸಿದ ಜಗನ್

Published On :

ಆಂಧ್ರಪ್ರದೇಶ: ಅಖಂಡ ಆಂಧ್ರಪ್ರದೇಶ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ ಎಸ್ ಜಗನ್ಮೋಹನ್ ರೆಡ್ಡಿ ವೈದ್ಯಕೀಯ ಸಹಾಯವನ್ನು ನಿರಾಕರಿಸಿದ್ದಾರೆ.

ಕಳೆದ 5 ದಿನಗಳಿಂದ ಜೈಲಿನಲ್ಲಿ ಉಪವಾಸ ಸತ್ಯಾಗ್ರಹದಲ್ಲಿ ತೊಡಗಿರುವ ಜಗನ್ ಅವರಿಗೆ ದ್ರವಾಹಾರ ನೀಡಲು ವೈದ್ಯರು ಸೂಚಿಸಿದ್ದರು. ಆದರೆ ಜಗನ್ ಇದನ್ನು ನಿರಾಕರಿಸಿ ಉಪವಾಸ ಮುಂದುವರಿಸಿದ್ದಾರೆ.

ಉಪವಾಸ ಸತ್ಯಾಗ್ರಹದಿಂದಾಗಿ ರೆಡ್ಡಿ ಅವರ ಸಕ್ಕರೆ ಪ್ರಮಾಣ ಕಮ್ಮಿಯಾಗಿದೆ. ಆದರೆ ಇಂದು ಬೆಳಗ್ಗೆ ರಕ್ತದೊತ್ತಡ ನಾರ್ಮಲ್ ಆಗಿತ್ತು ಎಂದು ವೈದ್ಯರು ಹೇಳಿದ್ದಾರೆ.

ಆದರೆ ಜಗನ್ ಅವರು intravenous fluids ತೆಗೆದು ಕೊಳ್ಳಲು ನಿರಾಕರಿಸಿದ್ದಾರೆ.

ಕಳೆದ ರಾತ್ರಿ ಜಗನ್ ರೆಡ್ಡಿಯನ್ನು ಚಂಚಲಗುಡ ಜೈಲಿನಿಂದ ಒಸ್ಮಾನಿಯಾ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.