ಈಗಿನ ಸುದ್ದಿ

ಭಟ್ಕಳ್ ಬಗ್ಗೆ ಹೇಳಿಕೆ: ಸಮಾಜವಾದಿ ಪಕ್ಷ ವಿರುದ್ಧ ಬಿಜೆಪಿ ಕಿಡಿ

Published On :

ಲಕ್ನೋ: ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸಹ ಸಂಸ್ಥಾಪಕ ಯಾಸಿನ್ ಭಟ್ಕಳ್ ಮುಸ್ಲಿಂ ಆಗಿರುವ ಕಾರಣ ಆತನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದ ಸಮಾಜವಾದಿ ಪಕ್ಷದ ವಿರುದ್ಧ ಬಿಜೆಪಿ ಕಿಡಿ ಕಾರಿದೆ.

ಅದೇ ವೇಳೆ ಉಗ್ರ ಕೃತ್ಯಗಳಿಗೆ ಧರ್ಮದ ಲೇಪ ನೀಡಬಾರೆಂದು ಬಿಜೆಪಿ ಸಮಾಜವಾದಿ ಪಕ್ಷಕ್ಕೆ ಹೇಳಿದೆ.

ಬಾಂಬ್ ಸ್ಫೋಟ ಹಾಗು ಇನ್ನಿತರ ಉಗ್ರ ಕೃತ್ಯಗಳಲ್ಲಿ ಭಾಗಿಯಾಗಿದ್ದ ಭಟ್ಕಳ್‌ಗಾಗಿ ಕಳೆದ 5 ವರ್ಷದಿಂದ ಪೊಲೀಸರು ಹುಡುಕಾಡುತ್ತಿದ್ದು, ಕಳೆದ ಗುರುವಾರ ಭಾರತ- ನೇಪಾಳ ಗಡಿ ಪ್ರದೇಶದಿಂದ ಪೊಲೀಸರು ಈತನನ್ನು ಬಂಧಿಸಿದ್ದರು. ಇದರ ಜತೆಗೆ ಭಟ್ಕಳ್‌ನ ಸಹಚರ ಅಸಾದುಲ್ಲ ಅಖ್ತರ್ ಕೂಡಾ ಸೆರೆಯಾಗಿದ್ದನು.

ಸಮಾಜವಾದಿ ಪಕ್ಷದ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ವಕ್ತಾರ ವಿಜಯ್ ಬಹದ್ದೂರ್ ಪಾಠಕ್, ಸಮಾಜವಾದಿ ಪಕ್ಷದ ನಾಯಕರು ಅಲ್ಪ ಸಂಖ್ಯಾತರ ಮತ ಗಳಿಸಲು ಹೊಸ ತಂತ್ರ ಪ್ರಯೋಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭಯೋತ್ಪಾದನೆ ದೇಶಕ್ಕೆ ಸಂಬಂಧಿಸಿದ ಸಮಸ್ಯೆಗಳಲ್ಲೊಂದು. ಇದನ್ನು ಧರ್ಮದ ಹೆಸರಲ್ಲಿ ನೋಡಬಾರದು ಎಂದು ಪಾಠಕ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷವೊಂದು ತನ್ನ ರಾಜ್ಯದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳ ಆರೋಪಿಗಳ ವಿರುದ್ಧವಿರುವ ಪ್ರಕರಣಗಳನ್ನು ಹಿಂಪಡೆದುಕೊಳ್ಳುತ್ತಿದೆಯೆಂದಾದರೆ, ಅಂಥಾ ಪಕ್ಷದಿಂದ ನಾವು ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಪಾಠಕ್ ಹೇಳಿದ್ದಾರೆ.
        
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.