ಮಹಿಳೆಯರ ಮೇಲಿನ ದೌರ್ಜನ್ಯ ಅಂತ್ಯವಾಗಬೇಕು: ಸೋನಿಯಾ

ನವದೆಹಲಿ: ಇತ್ತೀಚಿಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಮಹಿಳೆಯರ ಸಬಲೀಕರಣಕ್ಕಾಗಿ ಬರಿ ಕಾನೂನು ಮಾಡಿದರೇ ಸಾಕಾಗುವುದಿಲ್ಲ. ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಶನಿವಾರ ಹೇಳಿದ್ದಾರೆ.
ಇಂದು ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ಕಾರ್ಯಗಾರದಲ್ಲಿ ಮಾತನಾಡಿದ ಸೋನಿಯಾ, ಬರಿ ಕಾನೂನು ಮಾಡುವುದರಿಂದ ಮತ್ತು ಯೋಜನೆಗಳನ್ನು ಘೋಷಿಸುವುದರಿಂದ ಮಹಿಳೆಯರನ್ನು ಬಲ ಪಡಿಸಲು ಸಾಧ್ಯವಿಲ್ಲ ಎಂಬುದು ನಮಗೆ ಈಗ ಅರ್ಥವಾಗಿದೆ. ಹೀಗಾಗಿ ಯೋಜನೆಗಳು ಮತ್ತು ಕಾನೂನುಗಳು ತಳಮಟ್ಟದಿಂದ ಸಮರ್ಪಕವಾಗಿ ಜಾರಿಯಾಗಬೇಕು ಎಂದರು.
ಮಹಿಳೆಯರ ಮೇಲೆ ನಡೆಯುವ ಎಲ್ಲ ದೌರ್ಜನ್ಯಗಳಿಗೂ ನಾವು ಅಂತ್ಯ ಹಾಡಬೇಕಿದೆ ಮತ್ತು ಇದಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆಗ ಮಹಿಳೆಯರು ಸುರಕ್ಷಿತವಾಗಿ ಮತ್ತು ನಿರ್ಭೀತಿಯಿಂದ ಜೀವನ ಮಾಡಬಹುದು ಎಂದು ಸೋನಿಯಾ ಹೇಳಿದರು.
ಮಹಿಳಾ ಸಬಲೀಕರಣಕ್ಕಾಗಿ 'ಸಾಮಾಜಿಕ ಕ್ರಾಂತಿ' ಮಾಡಿ ಎಂದು ಕರೆ ನೀಡಿದ ಸೋನಿಯಾ, ಮುಖ್ಯವಾಗಿ ಮಹಿಳೆಯರ ಬಗೆಗಿನ ನಮ್ಮ ಮನೋ ಸ್ಥಿತಿ ಮತ್ತು ವಿಚಾರಗಳು ಬದಲಾಗಬೇಕು. ಮಹಿಳೆಯರಿಗೆ ಪುರುಷರಿಗೆ ಸಮಾನವಾದ ಸ್ಥಾನಮಾನ ನೀಡುವುದು ಒಂದು ದೊಡ್ಡ ಸವಾಲಾಗಿದ್ದು, ಮೊದಲು ಈ ಪುರುಷ ಮತ್ತು ಮಹಿಳೆ ಎಂಬ ತಾರತಮ್ಯ ಕಿತ್ತು ಹಾಕಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


