ಈಗಿನ ಸುದ್ದಿ

ಬಾಪು ಬಂಧನ: ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಗೆಹ್ಲೋಟ್

ಬಾಪು ಬಂಧನ: ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಗೆಹ್ಲೋಟ್
Published On :

ಜೈಪುರ: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸ್ವಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಪೊಲೀಸರು ಬಂಧಿಸಿ, ಇಂದೋರ್‌ದಿಂದ ಜೋಧ್‌ಪುರಕ್ಕೆ ಕರೆ ತಂದಿದ್ದಾರೆ ಎಂದು ಭಾನುವಾರ ಹೇಳಿದ್ದಾರೆ.

ಈ ಕುರಿತು ಜೋಧ್‌ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್, ಯಾವುದೇ ರಾಜಕಾರಣಿ, ನಟ, ನಟಿ ಅಥಮಾ ಧಾರ್ಮಿಕ ಗುರು ಸೇರಿದಂತೆ ಯಾರೂ ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಪ್ರಕಾರ ಬಾಪು ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪೊಲೀಸರು ಮುಕ್ತವಾಗಿ ತಮ್ಮ ಕೆಲಸ ಮಾಡುತ್ತಿದ್ದಾರೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಗೆಹ್ಲೋಟ್ ಅವರು ಹೇಳಿದ್ದಾರೆ. ಜೋಧ್‌ಪುರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೇಕಾದ ಎಲ್ಲ ಕ್ರಮಗಳನ್ನು ಪೊಲೀಸರು ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ನಿನ್ನೆ ಮಧ್ಯರಾತ್ರಿ ಇಂದೋರ್‌ನ ಆಶ್ರಮದಲ್ಲಿ ಅಸಾರಾಂ ಬಾಪು ಅವರನ್ನು ಬಂಧಿಸಿದ್ದ ಪೊಲೀಸರು, ಇಂದು ಮಧ್ಯಾಹ್ನ ಜೋಧ್‌ಪುರಕ್ಕೆ ಕರೆ ತಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.