ಈಗಿನ ಸುದ್ದಿ

ದುರ್ಗಾ ಪರಮೇಶ್ವರಿ ದೇಗುಲ ಸ್ಫೋಟಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ

ದುರ್ಗಾ ಪರಮೇಶ್ವರಿ ದೇಗುಲ ಸ್ಫೋಟಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ
Published On :

ಬೆಂಗಳೂರು: ನಗರದ ಬನಶಂಕರಿಯಲ್ಲಿನ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣಕ್ಕೆ ತೆರೆಬಿದ್ದಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಇಂದು ದೇವಾಲಯದ ಅರ್ಚಕ ಮಹೇಶ್ ಭಟ್‌ರನ್ನು ವಿಚಾರಣೆಗೆ ಒಳಪಡಿಸಿದರು. ಈ ವೇಳೆ ಅರ್ಚಕ ರಾತ್ರಿ ನೈವೇದ್ಯ ತಯಾರಿಸಿದ ಬಳಿಕ ಸಿಲಿಂಡರ್ ಆಫ್ ಮಾಡಿರಲಿಲ್ಲ. ಹೀಗಾಗಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಿಲಿಂಡರ್ ಸ್ಫೋಟಗೊಂಡಿರುವುದಾಗಿ ದಕ್ಷಿಣ ವಲಯದ ಡಿಸಿಪಿ ರೇವಣ್ಣ ಅವರು ಹೇಳಿದ್ದಾರೆ.

ಕಳೆದ ರಾತ್ರಿ ಕಾವೇರಿನಗರದಲ್ಲಿನ ಮಾದುರ್ಗಾ ಪರಮೇಶ್ವರಿ ದೇಗುಲದ ಗರ್ಭಗುಡಿಯಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಗರ್ಭಗುಡಿಯಲ್ಲಿ ಶೇಖರಣೆಯಾಗಿದ್ದ ಅಗರಬತ್ತಿ ಹಾಗೂ ಕರ್ಪೂರ ರಾಶಿ ಮೇಲೆ ದೀಪ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ಗರ್ಭಗುಡಿಯ ತುಂಬಾ ಹೊಗೆ ಆವರಿಸಿಕೊಂಡು. ಈ ಸಂದರ್ಭದಲ್ಲಿ ಉತ್ಪತ್ತಿಯಾದ ಮಿಥೇನ್‌ನಿಂದ ಸ್ಫೋಟ ಸಂಭವಿಸಿದೆ ಎನ್ನಲಾಗಿತ್ತು.

ದೇವಾಲಯದಲ್ಲಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿನ ಜನತೆ ಭಯಗ್ರಸ್ಥರಾಗಿದ್ದರು. ಈ ಸ್ಫೋಟದಿಂದಾಗಿ ಗರ್ಭಗುಡಿಯ ಬಾಗಿಲು ಮುರಿದಿದ್ದು, ಗೋಡೆಗಳು ಬಿರುಕು ಬಿಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.