ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ಪೊಲೀಸ್ ಅಧಿಕಾರಿ ಬಲಿಯಾಗಿದ್ದು, ಇತರ ಇಬ್ಬರು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಕಾಶ್ಮೀರದ ಬಡ್ಗಾಮ್ ಜಿಲ್ಲೆಯ ಚಾದೂರ ಪೊಲೀಸ್ ಠಾಣೆಯ ಹೊರಗಡೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಠಾಣಾ ಸಬ್ ಇನ್ಸ್‌ಪೆಕ್ಟರ್ ಶಬಿರ್ ಅಹ್ಮದ್ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಪೊಲೀಸರನ್ನು ಮೊಹ್ಮದ್ ಶಫಿ ಮತ್ತು ಫಿರ್ದೊಸ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಯನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement