ಈಗಿನ ಸುದ್ದಿ

ಕಾವೇರಿ ವಿವಾದ: ತಮಿಳುನಾಡಿಗೆ ಸುಪ್ರೀಂ ತರಾಟೆ

ಕಾವೇರಿ ವಿವಾದ: ತಮಿಳುನಾಡಿಗೆ ಸುಪ್ರೀಂ ತರಾಟೆ
Published On :

ನವದೆಹಲಿ: ಕಾವೇರಿ ನಿರ್ವಹಣಾ ಸಮಿತಿಯ ರಚನೆ ಮತ್ತು ಕರ್ನಾಟಕದ ಮೇಕೆದಾಟುವಿನಲ್ಲಿ ವಿದ್ಯುತ್ ಯೋಜನೆಗೆ ತಡೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಂಗಳವಾರ ತಮಿಳುನಾಡು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ಈಗಾಗಲೇ ಕಾವೇರಿ ಮೇಲುಸ್ತುವಾರಿ ಸಮಿತಿ ರಚನೆ ಮಾಡಲಾಗಿದೆ. ಎರಡು ರಾಜ್ಯಗಳಿಗೆ ಎಷ್ಟು ಪ್ರಮಾಣದ ನೀರು ಹರಿಸಬೇಕೆಂಬುದನ್ನು ನೋಡಿಕೊಳ್ಳಲು ಕಾವೇರಿ ನೀರು ನಿರ್ವಹಣಾ ಮಂಡಳಿ ಬದಲಿಗೆ ತಾತ್ಕಾಲಿಕ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದೆ. ಹೀಗಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತರಾತುರಿಯಲ್ಲಿ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಆರ್.ಎಂ. ಲೋಧ ಪೀಠ ತಿಳಿಸಿದ್ದಾರೆ.

ಕಾವೇರಿ ನದಿ ನೀರು ವಿಚಾರದಲ್ಲಿ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುವುದು ಸರಿಯಲ್ಲ ಎಂದು ತಮಿಳುನಾಡು ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ನೀವು ರಾಜ್ಯವನ್ನು ಪ್ರತಿನಿಧಿಸುತ್ತಿದ್ದೀರಿ, ಹೀಗಾಗಿ ಅಕ್ಕ-ಪಕ್ಕದ ಮನೆಯವರಂತೆ ಪದೇ ಪದೇ ಕ್ಯಾತೆ ತೆಗೆಯುವುದು ಸರಿಯಲ್ಲ ಎಂದು ತಮಿಳುನಾಡಿಗೆ ಸೂಚಿಸಿದ್ದಾರೆ.

ಕರ್ನಾಟಕದ ಯೋಜನೆಗಳಿಗೆ ಮಧ್ಯಂತರ ತಡೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಕರ್ನಾಟಕದ ಯೋಜನೆಗಳು ಇನ್ನು ಕಾರ್ಯಾರಂಭವೇ ಆಗಿಲ್ಲ. ಯಾವುದೇ ಯೋಜನೆಗಳು ಕೇವಲ ಎರಡು ಮೂರು ದಿನಗಳೊಳಗಾಗಿ ಮುಗಿಯುವುದಿಲ್ಲ. ಅದಕ್ಕಾಗಿ ವರ್ಷಗಳೆ ಹಿಡಿಯುತ್ತದೆ. ಹೀಗಾಗಿ ಯೋಜನೆಗಳಿಂದ ನಿಮ್ಮ ಹಕ್ಕುಗಳಿಗೆ ಧಕ್ಕೆಯಾದರೆ ಮಾತ್ರ ಸುಪ್ರೀಂಕೋರ್ಟ್‌ಗೆ ಬನ್ನಿ. ಅದನ್ನು ಬಿಟ್ಟು ಮಹತ್ವದಲ್ಲದ ವಿಷಯಗಳನ್ನು ತೆಗೆದುಕೊಂಡು ಕೋರ್ಟ್‌ಗೆ ಬರಬೇಡಿ ಎಂದು ತಮಿಳುನಾಡಿಗೆ ತಾಕೀತು ಮಾಡಿದೆ.

ಕರ್ನಾಟಕದ ಮೇಕೆದಾಟುವಿನಲ್ಲಿ ಕೈಗೊಳ್ಳುತ್ತಿರುವ ಯೋಜನೆಗಳಿಗೆ ಸಂಬಂಧಿಸಿದಂತೆ 4 ವಾರಗಳಲ್ಲಿ ಈ ಕುರಿತು ಉತ್ತರಿಸುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.