ಈಗಿನ ಸುದ್ದಿ

ನೀತಿ ಸಂಹಿತೆ ಉಲ್ಲಂಘಿಸಿಲ್ಲ, ಬರೀ ಹೇಳಿಕೆ ನೀಡಿದ್ದೆ: ಜಯಾ

Published On :

ಚೆನ್ನೈ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ನಾನು ನೀತಿ ಸಂಹಿತೆ ಉಲ್ಲಂಘಿಸಿಲ್ಲ. ಜನರ ಕಲ್ಯಾಣಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲು ಸರ್ಕಾರ ಸಿದ್ಧವಿದೆ ಎಂಬ ಒಂದು ಸಾಮಾನ್ಯ ಹೇಳಿಕೆ ನೀಡಿದ್ದೆ ಅಷ್ಟೆ ಎಂದು ಮಂಗಳವಾರ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ನವೆಂಬರ್ 28ರಂದು ತಮಿಳುನಾಡಿನ ಯೆರ್ಕೋಡ್ ಉಪ ಚುನಾವಣೆ ವೇಳೆ, ಎಐಎಡಿಎಂಕೆ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದ ಜಯಾ, ನೀತಿ ಸಂಹಿತೆ ಉಲ್ಲಂಘಿಸಿ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈ ಸಂಬಂಧ ಚುನಾವಣಾ ಆಯೋಗ ನಿನ್ನೆ ತಮಿಳುನಾಡು ಮುಖ್ಯಮಂತ್ರಿಗೆ ನೋಟಿಸ್ ಜಾರಿ ಮಾಡಿ, ಇಂದು ಸಂಜೆ 5 ಗಂಟೆಯೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಿತ್ತು.

ಆಯೋಗದ ನೋಟಿಸ್‌ಗೆ ಉತ್ತರಿಸಿರುವ ಜಯಲಲಿತಾ, ನಾನು ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ. ಆ ಪ್ರದೇಶದ ಜನರ ಅಭಿವೃದ್ಧಿಗಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದೆ. ಇದೊಂದು ಸಾಮಾನ್ಯ ಹೇಳಿಕೆ ಅಷ್ಟೆ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.