'ಮಹಾ' ಸಚಿವ ನಾರಾಯಣ ರಾಣೆ ಪುತ್ರ ನಿತೇಶ್ ಬಂಧನ
ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಮತ್ತು ಕೈಗಾರಿಕಾ ಸಚಿವ ನಾರಾಯಣ ರಾಣೆ ಅವರ ಪುತ್ರ ನಿತೇಶ್ ನಾರಾಯಣ ರಾಣೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಟೋಲ್ ಬೂತ್ ನೌಕರನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಿತೇಶ್ ರಾಣೆ ಅವರನ್ನು ಬಂಧಿನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಮುಂಬೈನಿಂದ ಗೋವಾಗೆ ತೆರಳುವಾಗ ನಿತೇಶ್ ರಾಣೆ ಸುಂಕ ವಸೂಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಗಡಿಯಲ್ಲಿರುವ ಟೋಲ್ ಬೂತ್ ನೌಕರನೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಅಲ್ಲದೆ ನೌಕರನನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿ, ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣ ಸಂಬಂಧ ನಿತೇಶ್ ರನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರಾಗಿರುವ ನಾರಾಯಣ ರಾಣೆ ಅವರು ಮಹಾರಾಷ್ಟ್ರದ ಕೈಗಾರಿಕಾ ಸಚಿವರಾಗಿದ್ದಾರೆ. ನರೇಂದ್ರ ಮೋದಿ ಅವರನ್ನು ಖ್ಯಾತ ಗಾಯಕಿ ಲತಾ ಮಂಗೇಷ್ಕರ್ ಅವರು ಬೆಂಬಲಿಸಿದ್ದಕ್ಕಾಗಿ ಅವರ ವಿರುದ್ಧ ಟೀಕೆ ಮಾಡಿದ್ದ ರಾಣೆ, ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣರಾಗಿದ್ದರು.
ರಾಣೆ ಅವರ ಪ್ರಥಮ ಪುತ್ರ ನಿಲೇಶ್ ರಾಣೆ ಕೂಡ ಕಾಂಗ್ರೆಸ್ ಸಂಸದರಾಗಿದ್ದು, ಇದೀಗ ಅವರ ದ್ವಿತೀಯ ಪುತ್ರ ನಿತೇಶ್ ರಾಣೆ ಅವರನ್ನು ರಾಜಕೀಯಕ್ಕೆ ಕರೆತರುವ ಉತ್ಸಾಹದಲ್ಲಿದ್ದರು. ಇದೀಗ ನಿತೇಶ್ ರಾಣೆ ಅವರ ಮೇಲಿರುವ ಹಲ್ಲೆ ಆರೋಪದಿಂದಾಗಿ ನಾರಾಯಣ್ ರಾಣೆ ಅವರು ಮುಜುಗರಕ್ಕೀಡಾಗುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

