80ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾ.ಡಿಸೋಜ ಆಯ್ಕೆ

ಬೆಂಗಳೂರು: 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ನಾ.ಡಿಸೋಜ ಅವರನ್ನು ಆಯ್ಕೆ ಮಾಡಲಾಗಿದೆ.
2014, ಜನವರಿ 7, 8 ಮತ್ತು 9ರಂದು ಕೊಡಗಿನಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಿಸೋಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಬುಧವಾರ ತಿಳಿಸಿದ್ದಾರೆ.
ಕೊಡಗಿನ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕಾಗಿ ಡಾ.ಎಂ.ಎಂ ಕಲಬುರ್ಗಿ, ದೇವನೂರು ಮಹಾದೇವ, ಲತಾ ರಾಜಶೇಖರ, ಬಿ.ವಿ.ವೀರಭದ್ರಪ್ಪ ಮತ್ತು ಹಂಪಾ ನಾಗರಾಜಯ್ಯ ಅವರ ಹೆಸರು ಕೇಳಿಬಂದಿದ್ದವು. ಆದರೆ ಅಂತಿಮವಾಗಿ ನಾ.ಡಿಸೋಜ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸಾಹಿತ್ಯ ಪರಿಷತ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


