ಈಗಿನ ಸುದ್ದಿ

ಅದು ಸಹಮತದ ಕಾಮ ಚೇಷ್ಟೆ: ತೇಜ್ಪಾಲ್ ಸಮರ್ಥನೆ

ಅದು ಸಹಮತದ ಕಾಮ ಚೇಷ್ಟೆ: ತೇಜ್ಪಾಲ್ ಸಮರ್ಥನೆ
Published On :

ಪಣಜಿ: ಸಹೋದ್ಯೋಗಿ ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡದ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿರುವ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್, ನಮ್ಮಿಬ್ಬರ ಮಧ್ಯೆ ನಡೆದಿದ್ದು ಸಹಮತದ ಪ್ರಣಯ ಚೇಷ್ಟೆ ಅಷ್ಟೇ ಎಂದು ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ತೇಜ್ಪಾಲ್‌ರನ್ನು ತನಿಖೆಗೆ ಒಳಪಡಿಸಿರುವ ಕ್ರೈಂಬ್ರಾಂಚ್ ತನಿಖಾ ತಂಡದ ಹಿರಿಯ ಅಧಿಕಾರಿಯೊರ್ವರು, ವಿಚಾರಣೆಗೆ ತೇಜ್ಪಾಲ್‌ರು ಸೂಕ್ತ ರೀತಿಯಲ್ಲಿ ಸಹಕರಿಸುತ್ತಿದ್ದಾರೆ. ತನಿಖೆಯು ಸಹ ಸೂಕ್ತ ರೀತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಸಹೋದ್ಯೋಗಿಗೆ ಕಿರುಕುಳ ನೀಡಿದ ಆರೋಪ ಹೊತ್ತಿರುವ ತೇಜ್ಪಾಲ್‌ರನ್ನು ಇಂದು ಸುದೀರ್ಘ ವಿಚಾರಣೆಗೆ ಒಳಪಡಿಸಲಾಯಿತು. ಈ ವೇಳೆ ಇದು ತಮ್ಮಿಬ್ಬರ ಪರಸ್ಪರ ಒಪ್ಪಿಗೆಯಿಂದ ನಡೆದ ಪ್ರಣಯಚೇಷ್ಟೆ ಎಂದು ಅವರು ಹೇಳುತ್ತಿದ್ದಾರೆ. ಈ ಹೇಳಿಕೆಯಿಂದಾಗಿ ತಾವು ಮಾಡಿರುವ ಕೃತ್ಯವನ್ನು ತೇಜ್ಪಾಲ್ ನಿರಾಕರಿಸುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿ ಸ್ಯಾಮಿ ಟಾವರೀಸ್ ಮೇಲ್ವಿಚಾರಣೆಯಲ್ಲಿ ತನಿಖಾಧಿಕಾರಿ ಸುನಿತಾ ಸಾವಂತ್ ನೇತೃತ್ವದ ತಂಡ ತೇಜ್ಪಾಲ್ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಶನಿವಾರ ಸಂಜೆಯಿಂದ ಪೊಲೀಸ್ ವಶದಲ್ಲಿರುವ ತೇಜ್ಪಾಲ್‌ರನ್ನು ಇಂದು ಮೂರನೇ ಬಾರಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಗೋವಾ ವೈದ್ಯಕೀಯ ಕಾಲೇಜ್‌ನಲ್ಲಿ ಮೂರನೇ ಸುತ್ತಿನ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಡಿಸೆಂಬರ್ 2 ಮತ್ತು 4 ರಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು.

ಗೋವಾದ ಪಂಚತಾರ ಹೊಟೇಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದ್ಯೋಗಿ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಡಿಯಲ್ಲಿ ತೇಜ್ಪಾಲ್‌ರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.