ರಾಯಲ-ತೆಲಂಗಾಣ: ಆಂಧ್ರ ಜನಪ್ರತಿನಿಧಿಗಳೊಂದಿಗೆ ಇಂದು ಚರ್ಚೆ

ನವದೆಹಲಿ: ರಾಯಲ-ತೆಲಂಗಾಣ ರಾಜ್ಯ ರಚನೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ತೆಲಂಗಾಣ ರಾಜ್ಯ ರಚನೆ ಕುರಿತು ರಚಿಸಲಾಗಿದ್ದ ಕೇಂದ್ರದ ಉನ್ನತ ಸಚಿವರ ತಂಡದ ಶಿಫಾರಸ್ಸಿನಂತೆ ನೂತನ ತೆಲಂಗಾಣ ರಾಜ್ಯಕ್ಕೆ ರಾಯಲ ಸೀಮೆ ಪ್ರಾಂತ್ಯದ 2 ಜಿಲ್ಲೆಗಳನ್ನು ಸೇರಿಸುವ ಮೂಲಕ ರಾಯಲ ತೆಲಂಗಾಣ ರಚನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ, ಆಂಧ್ರ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಸೇರಿದಂತೆ ಆಂಧ್ರ ಪ್ರದೇಶದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.
ಆಡಳಿತಾತ್ಮಕ ದೃಷ್ಟಿಯಿಂದ ನೂತನ ತೆಲಂಗಾಣ ರಾಜ್ಯಕ್ಕೆ ಈಗಿರುವ 10 ಜಿಲ್ಲೆಗಳೊಂದಿಗೆ ರಾಯಲ ಸೀಮೆ ಪ್ರಾಂತ್ಯದ ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಕೇಂದ್ರದ ಸಚಿವರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತೆಲಂಗಾಣ ರಾಜ್ಯಕ್ಕಾಗಿ ಆಗ್ರಹಿಸುತ್ತಿರುವ ತೆಲಂಗಾಣ ಭಾಗದ ಜನಪ್ರತಿನಿಧಿಗಳು ಕೂಡ ಕೇಂದ್ರದ ನೂತನ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನೂತನ ತೆಲಂಗಾಣ ರಾಜ್ಯದ ಅಸ್ತಿತ್ವ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಆದರೆ ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು ಚಳಿಗಾಲದ ಅಧಿವೇಶನದಲ್ಲಿಯೇ ತೆಲಂಗಾಣ ರಾಜ್ಯರಚನೆ ಮಸೂದೆಯನ್ನು ಘೋಷಿಸಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


