ವಕೀಲೆಗೆ ಲೈಂಗಿಕ ಕಿರುಕುಳ: ನ್ಯಾ.ಗಂಗೂಲಿ ವಿರುದ್ಧ ಸಾಕ್ಷಿ?

ನವದೆಹಲಿ: ತರಬೇತಿಗಾಗಿ ಬಂದಿದ್ದ ಯುವ ವಕೀಲೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ಎ.ಕೆ.ಗಂಗೂಲಿ ಅವರ ವಿರುದ್ಧ ಸಾಕ್ಷ್ಯಾಧಾರಗಳು ಲಭ್ಯವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಲೈಂಗಿಕ ಕಿರುಕುಳ ಪ್ರಕರಣದ ತನಿಖೆಗಾಗಿ ನೇಮಿಸಲ್ಪಟ್ಟಿದ್ದ ಸುಪ್ರೀಂ ಕೋರ್ಟ್ನ ಮೂವರು ನ್ಯಾಯಮೂರ್ತಿಗಳ ತಂಡಕ್ಕೆ ಪ್ರಾಥಮಿಕ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಸ್ವತಃ ಈ ತಂಡವೇ ಇದನ್ನು ಸ್ಪಷ್ಟಪಡಿಸಿವೆ. ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ನ್ಯಾಯಾಧೀಶರ ತಂಡ, 'ಮೇಲುನೋಟಕ್ಕೆ ಎ.ಕೆ.ಗಂಗೂಲಿ ಅವರ ವಿರುದ್ಧದ ಆರೋಪದಲ್ಲಿ ಸತ್ಯಾಂಶವಿದೆ. ಈ ಬಗ್ಗೆ ಪ್ರಾಥಮಿಕ ಮಾಹಿತಿಗಳು ಲಭ್ಯವಾಗಿದ್ದು, ಪ್ರಕರಣದ ಕುರಿತು ಗಂಗೂಲಿ ಅವರು ನಡೆದುಕೊಳ್ಳುತ್ತಿರುವ ರೀತಿ ಸ್ವಾಗತಾರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೇಮಿಸಿದ್ದ ನ್ಯಾ.ಪಿ.ಸದಾಶಿವಂ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು ತನ್ನ ಪ್ರಾಥಮಿಕ ವರದಿಯನ್ನು ತಯಾರಿಸಿದ್ದು, ಮುಖ್ಯ ನ್ಯಾಯಮೂರ್ತಿಗಳು ಈ ವರದಿಯ ಪ್ರತಿಯನ್ನು ಕಾನೂನು ಸಮಿತಿಗೆ ಮತ್ತು ಆರೋಪವನ್ನು ನಿರಾಕರಿಸುತ್ತಿರುವ ಎಕೆ ಗಂಗೂಲಿ ಅವರಿಗೆ ರವಾನಿಸಲು ಮುಂದಾಗಿದ್ದಾರೆ.
ಒಟ್ಟಾರೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸತ್ಯ ಶೋಧನಾ ಸಮಿತಿ ಪ್ರಮುಖ ತಿರುವು ನೀಡಿದ್ದು, ನ್ಯಾಯ ದೊರಕಸಿಕೊಡಬೇಕಾದ ನ್ಯಾಯಮೂರ್ತಿಗಳೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ದೇಶದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


