ಈಗಿನ ಸುದ್ದಿ

ತೇಜ್ಪಾಲ್ ಕಿರುಕುಳ: 3 ಸಾಕ್ಷಿಗಳ ಹೇಳಿಕೆ ಪಡೆದ ಪೊಲೀಸರು

Published On :

ಪಣಜಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ತೆಹೆಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ವಿರುದ್ಧದ ಪ್ರಕರಣ ಸಂಬಂಧ ಶುಕ್ರವಾರ ಮೂವರು ಸಾಕ್ಷಿಗಳ ಹೇಳಿಕೆಯನ್ನು ಗೋವಾ ಕೋರ್ಟ್ ನ್ಯಾಯಾಧೀಶರ ಎದುರು ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ತೆಹಲ್ಕಾ ನಿಯತಕಾಲಿಕೆಯ ಮೂವರು ನೌಕರರ ಹೇಳಿಕೆಯನ್ನು ಗೋವಾ ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮನನೊಂದು ತೆಹಲ್ಕಾ ನಿಯತಕಾಲಿಕೆಯ ನೌಕರರಾಗಿದ್ದ ಇಶಾನ್ ತಂಖಾ, ಜಿ. ವಿಷ್ಣು ಮತ್ತು ದಾಸ್‌ಗುಪ್ತ ಎಂಬುವರು ತಮ್ಮ ಕೆಲಸಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಹೀಗಾಗಿ ಈ ಮೂವರ ಹೇಳಿಕೆಯನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಈ ರೀತಿಯಲ್ಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ತೆಹೆಲ್ಕಾ ನಿಯತಕಾಲಿಕೆಯ ವ್ಯವಸ್ಥಾಪಕ ಸಂಪಾದಕಿ ಶೋಮಾ ಚೌಧರಿ ಅವರ ಹೇಳಿಕೆಯನ್ನು ವಾರದ ಕೊನೆಯಲ್ಲಿ ಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋವಾದ ಪಂಚತಾರ ಹೊಟೇಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದ್ಯೋಗಿ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಡಿಯಲ್ಲಿ ತೇಜ್ಪಾಲ್‌ರನ್ನು ಸಿಲುಕಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.