ಈಗಿನ ಸುದ್ದಿ

ಭೀಕರ ಅಪಘಾತ: 6 ವಿದ್ಯಾರ್ಥಿಗಳು ಸೇರಿ 7 ಸಾವು

ಭೀಕರ ಅಪಘಾತ: 6 ವಿದ್ಯಾರ್ಥಿಗಳು ಸೇರಿ 7 ಸಾವು
ಸಾಂದರ್ಭಿಕ ಚಿತ್ರ
Published On :

ಸೋಲಾಪುರ: ಮಹಾರಾಷ್ಟ್ರ ತುಳಜಾಪುರ ಬಳಿ ಮಿನಿ ಬಸ್ ಹಾಗೂ ವೋಲ್ವಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಮಿನಿ ಬಸ್‌ನ ಚಾಲಕ ಸೇರಿ 7  ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ.

ಸೋಲಾಪುರ ಮತ್ತು ತುಳಜಾಪುರ ರಾಷ್ಟ್ರೀಯ ಹೆದ್ದಾರಿ ಮೂಲಕ ಇಂದು ಬೆಳಗ್ಗೆ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಮಿನಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಆರು ವಿದ್ಯಾರ್ಥಿಗಳು ಮತ್ತು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿದ್ಯಾಥಿಗಳಾದ ಅಕ್ಷಯ್ ಪಾಟೀಲ್, ವಲ್ಲಭ್, ಗಣೇಶ್ ಕುಂಬಾರ್, ಆಕಾಶ್, ಸೂರಜ್ ಪಾಟೀಲ್, ಪಂಕಜ್ ಕುಂಬಾರ್ ಮತ್ತು ಚಾಲಕ ಪ್ರತಾಪ್ ಮೃತ ದುರ್ದೈವಿಗಳು, ಇವರೆಲ್ಲ ಕೊಲ್ಹಾಪುರದ ಮೂಲದವರು ಎನ್ನಲಾಗಿದೆ.

ಪ್ರವಾಸ ನಿಮಿತ್ತ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಇಂದು ಬೆಳಗ್ಗೆ ಎರಡು ಮಿನಿ ಬಸ್‌ಗಳಲ್ಲಿ ಪ್ರವಾಸಕೈಗೊಂಡಿದ್ದರು. ಅಪಘಾತಕ್ಕೀಡಾದ ಮಿನಿ ಬಸ್‌ನಲ್ಲಿ ಚಾಲಕ ಸೇರಿದಂತೆ ಒಟ್ಟು 17 ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಅಪಘಾತದಲ್ಲಿ ಒಟ್ಟು 7 ಮಂದಿ ಸ್ಥಳದಲ್ಲೇ ಮೃತಪಟ್ಟರೆ ಉಳಿದಂತೆ 10 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊದಲಿಗೆ ಗಾಯಗೊಂಡ ವಿದ್ಯಾರ್ಥಿಗಳನ್ನು ತುಳಜಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವಿದ್ಯಾರ್ಥಿಗಳ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಮೃತ ವಿದ್ಯಾರ್ಥಿಗಳ ದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಅಲ್ಲದೆ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಿಲಾಯಿತು. ಅಪಘಾತದಿಂದಾಗಿ ಸೋಲಾಪುರ ಮತ್ತು ತುಳಜಾಪುರ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ಥವ್ಯಸ್ಥಗೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.