ಈಗಿನ ಸುದ್ದಿ

ಮಧ್ಯಪ್ರದೇಶ, ರಾಜಸ್ಥಾನ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ

ಮಧ್ಯಪ್ರದೇಶ, ರಾಜಸ್ಥಾನ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
Published On :

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಜಯ ದಾಖಲಿಸುವತ್ತ ದಾಪುಗಾಲಿಟ್ಟಿದೆ. ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹ್ಯಾಟ್ರಿಕ್ ಸಾಧಿಸಲಿದ್ದಾರೆ.

ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಬೆಳಗ್ಗೆ 10.15ರ ವೇಳೆಗೆ 144 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷದ ಪರವಾಗಿ ಪವಾಡ ನಡೆಯದಿದ್ದರೆ ಬಹುಮತ ಪಡೆಯುವುದು ಬಹುತೇಕ ಖಚಿತವಾಗಿದೆ.

ಒಟ್ಟು 230 ಕ್ಷೇತ್ರಗಳಿಗೆ ನವೆಂಬರ್ 25ರಂದು ಚುನಾವಣೆ ನಡೆದಿತ್ತು. ಈ ಬಾರಿ ಕೂಡ ಬಿಜೆಪಿ ಅಧಿಕಾರಕ್ಕೆ ಬಂದರೆ ಶಿವರಾಜ್ ಸಿಂಗ್ ಚೌಹಾಣ್ ಹ್ಯಾಟ್ರಿಕ್ ಸಾಧಿಸಿದಂತಾಗುತ್ತದೆ. ಬಹುಮತ ಗಳಿಸಲು ಬಿಜೆಪಿ 116 ಸ್ಥಾನಗಳು ಬೇಕು. ಆದರೆ ಸಮೀಕ್ಷೆ ಪ್ರಕಾರ, ಚೌಹಾಣ್ ಸರ್ಕಾರ 141 ಸ್ಥಾನಗಳನ್ನು ಗಳಿಸುವುದು ನಿಶ್ಟಿತವಾಗಿದೆ.

ಯುವ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಂದ ಯಾವುದೇ ಚಮತ್ಕಾರ ನಡೆದಿಲ್ಲ. ಸದ್ಯ ಕಾಂಗ್ರೆಸ್ ಕೇವಲ 55 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ. ಬಹುಜನ ಸಮಾಜವಾದಿ ಪಕ್ಷ 3 ಸ್ಥಾನಗಳಲ್ಲಿ ಮುಂದಿದೆ.

ರಾಜಸ್ಥಾನದಲ್ಲಿ ಸಂಭವನೀಯ ಮುಖ್ಯಮಂತ್ರಿ ವಸುಂಧರ ರಾಜೆ ಅವರ ನೇತೃತ್ವದಲ್ಲಿ ಪಕ್ಷ ಭಾರಿ ಮುನ್ನಡೆ ಸಾಧಿಸಿದ್ದು. ಬೆಳಗ್ಗೆ 10.15ರ ವೇಳೆಗೆ 149 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಒಟ್ಟು 200 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಈ ವಿಧಾನಸಭೆಯಲ್ಲೂ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಇದೆ.

ಹಾಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನೇತೃತ್ವದ ಕಾಂಗ್ರೆಸ್ ಕೇವಲ 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗೂ ಪಕ್ಷೇತರರು 20 ಸ್ಥಾನಗಳಲ್ಲಿ ಮುಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.