ಈಗಿನ ಸುದ್ದಿ

ರಾಜಸ್ತಾನದಲ್ಲಿ ರಾಜೇ ಮೋಡಿ: ಆಡಳಿತ ವಿರೋಧಿ ಅಲೆಗೆ ಕೊಚ್ಚಿ ಹೋದ 'ಕೈ'

Published On :

ಜೈಪುರ: ರಾಜಸ್ತಾನದಲ್ಲಿ ಆಡಳಿತ ವಿರೋಧಿ ಅಲೆಗೆ ಕಾಂಗ್ರೆಸ್ ಕೊಚ್ಚಿ ಹೋಗಿದ್ದು, ಮೋದಿ ಮೋಡಿಯಿಂದಾಗಿ ಅಧಿಕಾರದ ಗದ್ದುಗೆ ಬಿಜೆಪಿಯತ್ತ ವಾಲಿದೆ.

ರಾಜಸ್ತಾನ ವಿಧಾನಸಭಾ ಬಹುತೇಕ ಬಿಜೆಪಿಯತ್ತ ವಾಲಿದ್ದು, ಆಡಳಿತ ವಿರೋಧಿ ಅಲೆಗೆ ಕಾಂಗ್ರೆಸ್ ಕೈ ಮುರಿದಿದೆ. ರಾಜಸ್ತಾನ ವಿಧಾನಸಭೆ ಒಟ್ಟು 200 ಸ್ಥಾನಗಳನ್ನು ಹೊಂದಿದ್ದು, ಆ ಪೈಕಿ ಬಿಜೆಪಿ ಒಟ್ಟು 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಕಳೆದ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಅಶೋಕ್ ಗೆಹ್ಲೂಟ್ ನೇತೃತ್ವದ ಕಾಂಗ್ರೆಸ್ ಪಕ್ಷ ಈ ಭಾರಿ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ವಸುಂಧರಾ ರಾಜೆ ಅವರು, ಪ್ರಸಕ್ತ ಚುನಾವಣಾ ಗೆಲವಿನ ಶೇಯಸ್ಸನ್ನು ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ್ದಾರೆ. ನರೇಂದ್ರ ಮೋದಿ ಅವರ ಪ್ರಭಾವ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಪ್ರಮುಖ ಪಾತ್ರವಹಿಸಿದೆ. ಜನಾಭಿಪ್ರಾಯಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಗುಜರಾತ್‌ನಲ್ಲಿ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಜನತೆ ಮತದಾನ ಮಾಡಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಗೆ ಈ ವಿಧಾನಸಭಾ ಚುನಾವಣೆ ದಿಕ್ಸೂಚಿಯಾಗಲಿದ್ದು, ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ವಸುಂದರಾ ರಾಜೆ ಹೇಳಿದರು. ರಾಜಸ್ತಾನದ ಮುಂದಿನ ಮುಖ್ಯಮಂತ್ರಿಯಾಗಿ ವಸುಂದರಾ ರಾಜೇ ಅವರೇ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.