ಈಗಿನ ಸುದ್ದಿ

'ಲೋಕಪಾಲ್'ಗಾಗಿ ಮತ್ತೆ ಹೋರಾಟ: ಅಣ್ಣಾ ಎಚ್ಚರಿಕೆ

'ಲೋಕಪಾಲ್'ಗಾಗಿ ಮತ್ತೆ ಹೋರಾಟ: ಅಣ್ಣಾ ಎಚ್ಚರಿಕೆ
Published On :

ರಾಲೆಗಾಂವ್ಸಿದ್ಧಿ: ಇದೇ ಚಳಿಗಾಲದ ಅಧಿವೇಶನದಲ್ಲೇ ಲೋಕಪಾಲ್ ಮಸೂದೆಯನ್ನು ಅಂಗೀಕರಿಸುವಂತೆ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಸೋಮವಾರ ಆಗ್ರಹಿಸಿದ್ದಾರೆ.

ಇಂದು ತಮ್ಮ ಸ್ವಗ್ರಾಮ ರಾಲೆಗಾಂವ್ ಸಿದ್ಧಿಯಲ್ಲಿ ಸುದ್ದಿಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಜಾರೆ, ಈಗ ನಡೆಯುತ್ತಿರುವ ಅಧಿವೇಶನದಲ್ಲೇ ಲೋಕಾಪಾಲ್ ಮಸೂದೆಯನ್ನು ಅಂಗೀಕರಿಸಿಬೇಕು, ಇಲ್ಲದಿದ್ದರೆ ಮತ್ತೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಲೋಕಪಾಲ್ ಮಸೂದೆ ಜಾರಿಗಾಗಿ ದೆಹಲಿಯಲ್ಲಿ ನಾಳೆಯಿಂದಲೇ ನಾನು ಮತ್ತೆ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಅಣ್ಣಾ ಹಜಾರೆ ತಿಳಿಸಿದ್ದಾರೆ.

2011ರಲ್ಲಿ ನಾನು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾಗ, ಉಪವಾಸ ಕೈ ಬಿಡಿ ಜನಲೋಕಪಾಲ್ ಮಸೂದೆ ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದರು. ಅದನ್ನು ನಂಬಿ ನಾನು ಉಪವಾಸ ಕೈ ಬಿಟ್ಟೆ. ಆದರೆ ಇದುವರೆಗೂ ಲೋಕಪಾಲ್ ಮಸೂದೆಯನ್ನು ಅಂಗೀಕರಿಸದೇ, ಕೇಂದ್ರ ಸರ್ಕಾರ ನನಗೆ ಮೋಸ್ ಮಾಡಿದೆ ಎಂದು ಅಣ್ಣಾ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.