ಸರ್ಕಾರ ರಚನೆಗೆ ಯತ್ನ, ಆದರೆ ಕುದುರೆ ವ್ಯಾಪರ ಇಲ್ಲ: ಬಿಜೆಪಿ

ನವದೆಹಲಿ: ದೆಹಲಿಯಲ್ಲಿ ಸರ್ಕಾರ ರಚನೆಗೆ ಪ್ರಯತ್ನಿಸಲಾಗುವುದು. ಆದರೆ ಯಾವುದೇ ಕಾರಣಕ್ಕೂ ಕುದುರೆ ವ್ಯಾಪಾರ(ಶಾಸಕರ ಖರೀದಿ) ನಡೆಸುವುದಿಲ್ಲ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಸೋಮವಾರ ಸ್ಪಷ್ಟಪಡಿಸಿದೆ.
ದೆಹಲಿ ಜನತೆಗೆ ಜನಪ್ರಿಯ ಸರ್ಕಾರ ನೀಡುವುದು ನಮ್ಮ ಜವಾಬ್ದಾರಿ. ಡಾ.ಹರ್ಷವರ್ಧನ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಗೆ ಬೇರೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಚುನಾವಣೆ ವೇಳೆ ದೆಹಲಿ ಉಸ್ತುವಾರಿ ವಹಿಸಿದ್ದ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ(ಎಎಪಿ) ಬೆಂಬಲ ಕೋರುತ್ತಿರಾ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ನಾವು ಯಾರ ಬೆಂಬಲವನ್ನು ಕೋರುವುದಿಲ್ಲ. ಜನತೆ ನೀಡಿದ ತೀರ್ಪುನ್ನು ಗೌರವಿಸುತ್ತೇವೆ ಎಂದಿದ್ದಾರೆ. ಅಲ್ಲದೆ ಆಮ್ ಆದ್ಮಿಯಿಂದ ಈ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲದಿರುವುದರಿಂದ ಬೆಂಬಲ ಕೋರುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ಸರ್ಕಾರ ರಚನೆಗಾಗಿ ಪಕ್ಷ ಕುದುರೆ ವ್ಯಾಪಾರ ನಡೆಸುವುದಿಲ್ಲ ಎಂದು ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಡಾ.ಹರ್ಷವರ್ಧನ್ ಅವರು ತಿಳಿಸಿದ್ದಾರೆ.
ಸರ್ಕಾರ ರಚನೆಗೆ ಬೇಕಾದ ಅಗತ್ಯ ಬಹುಮತ ನಮಗೆ ಇಲ್ಲ. ಹೀಗಾಗಿ ನಾವು ಸರ್ಕಾರ ರಚನೆ ಬಗ್ಗೆ ವಿಚಾರ ಮಾಡಿಲ್ಲ. ಬೇರೆ ಪಕ್ಷಗಳು ನಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗದಿದ್ದರೆ, ನಾವು ಬಲವಂತ ಬೆಂಬಲ ಪಡೆಯುವುದಾಗಲಿ ಅಥವಾ ಶಾಸಕರನ್ನು ಖರೀದಿ ಮಾಡುವುದಾಗಲಿ ಮಾಡುವುದಿಲ್ಲ ಎಂದು ಹರ್ಷವರ್ಧನ್ ಹೇಳಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಬೇಕಾದ್ರೆ ಕನಿಷ್ಠ ನಾಲ್ಕು ಶಾಸಕರ ಬೆಂಬಲ ಬೇಕು. ಆದರೆ ಪಕ್ಷೇತರರಿಬ್ಬರ ಬೆಂಬಲ ಸಿಕ್ಕರೂ ಬಿಜೆಪಿ ಬಲ 34ಕ್ಕೆ ನಿಂತು ಅತಂತ್ರವಾಗಲಿದೆ. ಇನ್ನು 28 ಸ್ಥಾನಗಳನ್ನು ಪಡೆದಿರುವ ಎಎಪಿ ಯಾವುದೇ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ. ಹೀಗಾಗಿ ದೆಹಲಿಯಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


