ಮಿಜೋರಾಂ ಮತ್ತೆ 'ಕೈ' ವಶ
ಐಜ್ವಾಲ್: ಕಳೆದ ನವೆಂಬರ್ 25ರಂದು ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮತ್ತೆ ಆಡಳಿರೂಢ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ಅಧಿಕಾರವನ್ನು 'ಕೈ' ವಶ ಮಾಡಿಕೊಂಡಿದೆ.
ಮಿಜೋರಾಂನ ಒಟ್ಟು 8 ಜಿಲ್ಲೆಗಳ 40 ವಿಧಾಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 27 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರಿದೆ.
ಮಿಜೋರಾಂ ಮುಖ್ಯಮಂತ್ರಿ ಲಾಲ್ಥನ್ ಹೌಲ ಅವರು ಸಹ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಈವರೆಗೆ ಕಾಂಗ್ರೆಸ್ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಉಳಿದಂತೆ ಮಿಜೋರಾಂ ನ್ಯಾಷನಲ್ ಫ್ರಂಟ್(ಎಂಎನ್ಫ್) 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಬಿಜೆಪಿ 1 ಸ್ಥಾನದಲ್ಲಿ ಗೆಲವು ಸಾಧಿಸಿದರೆ, ಜೋರಾಂ ರಾಷ್ಚ್ರೀಯ ಪಕ್ಷ(ಝಎನ್ಪಿ) 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

