ಸಂಸತ್ತಿನ ಉಭಯ ಸದನಗಳಲ್ಲಿ ಮಾರ್ಧನಿಸಿದ ತೆಲಂಗಾಣ ಗದ್ದಲ

ನವದಹೆಲಿ: ತೆಲಂಗಾಣ ರಾಜ್ಯ ರಚನೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಪ್ರತಿಪಕ್ಷಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಉಂಟಾದ ಗದ್ದಲದಿಂದಾಗಿ ಸಂಸತ್ತಿನ ಉಭಯ ಸದನಗಳನ್ನು ಮುಂದೂಡಲಾಗಿದೆ.
ಲೋಕಸಭಾ ಕಲಾಪದಲ್ಲಿ ತೆಲಂಗಾಣ ರಾಜ್ಯ ರಚನೆಗೆ ವಿರೋಧ ವ್ಯಕ್ತಪಡಿಸಿದ ಟಿಡಿಪಿ(ತೆಲುಗು ದೇಶಂ) ಪಕ್ಷದ ಸದಸ್ಯರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನಲೆಯಲ್ಲಿ ಲೋಕಸಭೆಯಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ಮೂಡಿತ್ತು. ಟಿಡಿಪಿ ಸದಸ್ಯರಿಗೆ ಎಡಪಕ್ಷಗಳ ಸದಸ್ಯರು ಬೆಂಬಲ ಸೂಚಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿ ಸ್ಪೀಕರ್ ಮೀರಾಕುಮಾರ್ ಅವರು ಸದನವನ್ನು ಮಧ್ಯಾಹ್ನಕ್ಕೆ ಮುಂದೂಡುವಂತಾಯಿತು.
ತೆಲುಗು ದೇಶಂ ಪಕ್ಷದ ಸದಸ್ಯರು ಆಂಧ್ರ ಪ್ರದೇಶ ಉಳಿಸಿ ಎಂಬ ಘೋಷಣೆಗಳನ್ನು ಕೂಗುತ್ತಿದ್ದರೆ, ಅತ್ತ ಬಿಎಸ್ಪಿ ಪಕ್ಷದ ಸದಸ್ಯರು ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದ ಕೋಮು ಗಲಭೆ ಕುರಿತು ದಿನಪತ್ರಿಕೆಗಳು ಪ್ರಕಟಿಸಿದ್ದ ವರದಿಗಳನ್ನು ತೋರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಕೇಂದ್ರಸರ್ಕಾರದೆ ಬೆಲೆಏರಿಕೆಯನ್ನು ಖಂಡಿಸಿ ಎಡಪಕ್ಷಗಳು ಸದನದ ಬಾವಿಗಿಳಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.
ಗದ್ದಲ ಮುಂದುವರೆಯುತ್ತಿದ್ದಂತೆಯೇ ಮಧ್ಯ ಪ್ರವೇಶಿಸಿದ ಸ್ಪೀಕರ್ ಎಲ್ಲ ಸದಸ್ಯರನ್ನು ಶಾಂತಪಡಿಸುವಲ್ಲಿ ಪ್ರಯತ್ನಿಸಿದರಾದರೂ ಸದಸ್ಯರು ತಮ್ಮ ತಮ್ಮ ಸ್ಥಾನಗಳಿಗೆ ಮರಳದ ಕಾರಣ ಸ್ಪೀಕರ್ ಮೀರಾಕುಮಾರ್ ಅವರು ಸದನವನ್ನು ಮಧ್ಯಾಹ್ನದವರೆಗೂ ಮುಂದೂಡಿದರು.
ರಾಜ್ಯಸಭೆಯಲ್ಲಿಯೂ ಸಹ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ರಾಜ್ಯಸಭೆಯಲ್ಲಿ ಕೇರಳ ರಾಜ್ಯದ ಸದಸ್ಯರು ಮತ್ತು ಸಂಸದರು ರಬ್ಬರ್ ಆಮದು ಮಾಡಿಕೊಳ್ಳುವುದನ್ನು ಕೂಡಲೇ ಸರ್ಕಾರ ನಿಲ್ಲಿಸಬೇಕು ಮತ್ತು ರಬ್ಬರ್ ಅನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು. ಹೀಗಾಗಿ ರಾಜ್ಯಸಭೆಯನ್ನೂ ಕೂಡ ಮೂಂದೂಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


