3ನೇ ಬಾರಿ ಛತ್ತೀಸ್ಗಡ ಮುಖ್ಯಮಂತ್ರಿಯಾಗಿ ರಮಣ್ ಸಿಂಗ್ ಪ್ರಮಾಣ

ರಾಯ್ಪುರ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲವು ಸಾಧಿಸಿದ್ದ ಡಾ.ರಮಣ್ ಸಿಂಗ್ ಅವರು ಗುರುವಾರ ಮೂರನೇ ಬಾರಿಗೆ ಛತ್ತೀಸ್ಗಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.
ಕಳೆದ ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ರಮಣ್ ಸಿಂಗ್ ಅವರು ಇಂದು ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು.
ರಾಯ್ಪುರದ ಪೊಲೀಸ್ ಪರೇಡ್ ಗ್ರೌಂಡ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ 61 ವರ್ಷದ ರಮಣ್ ಸಿಂಗ್ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಹಾಗೂ ಪಂಜಾಬ್ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಸೇರಿದಂತೆ ಪಕ್ಷದ ಹಲವು ನಾಯಕರು ಭಾಗವಹಿಸಿದ್ದರು.
ನಕ್ಸಲರ ಬಂದೂಕಿನ ನಳಿಕೆಗೂ ಬೆದರದೆ ಹಕ್ಕು ಚಲಾಯಿಸಿದ್ದ ಛತ್ತೀಸ್ಗಡದ ಜನತೆ ಮೂರನೇ ಬಾರಿಗೂ ಡಾ.ರಮಣ್ಸಿಂಗ್ ಅವರಿಗೆ ಆಶೀರ್ವಾದ ಮಾಡಿದ್ದಾರೆ. 'ನಕ್ಸಲ್ ದಾಳಿ'ಯ ಲಾಭ ಪಡೆದುಕೊಳ್ಳುವಲ್ಲಿ ಕಾಂಗ್ರೆಸ್ ವಿಫಲವಾಗಿದ್ದು ಮತ್ತೆ ಪ್ರತಿಪಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
90 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 49, ಕಾಂಗ್ರೆಸ್ 40 ಹಾಗೂ ಇತರರು ಎರಡು ಸ್ಥಾನಗಳಲ್ಲಿ ಗೆಲವು ಸಾಧಿಸಿದ್ದಾರೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ ಸರ್ಕಾರ ರಚಿಸಲು ಸನ್ನದ್ಧವಾಗಿತ್ತು. ಆಂತರಿಕ ಕಿತ್ತಾಟದಿಂದ ಅಜಿತ್ ಜೋಗಿ ನೇತೃತ್ವದಲ್ಲಿ ಕಾಂಗ್ರೆಸ್ ಸೋಲನುಭವಿಸಿದ್ದು 'ಪರಾಮರ್ಶೆ'ಯ ಮೊರೆ ಹೋಗಿದೆ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


