ಈಗಿನ ಸುದ್ದಿ

ದೆಹಲಿಯಲ್ಲಿ ಆಮ್ ಆದ್ಮಿಯಿಂದ ಸರ್ಕಾರ ರಚನೆ ಸಾಧ್ಯತೆ

ದೆಹಲಿಯಲ್ಲಿ ಆಮ್ ಆದ್ಮಿಯಿಂದ ಸರ್ಕಾರ ರಚನೆ ಸಾಧ್ಯತೆ
Published On :

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ಬಹುಮತ ಕೊರತೆ ಎದುರಿಸುತ್ತಿದ್ದರೂ, ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವ ಬಗ್ಗೆ ಆಮ್ ಆದ್ಮಿ ಪಕ್ಷ(ಎಎಪಿ) ಶುಕ್ರವಾರ ಸುಳಿವು ನೀಡಿದೆ.

ದೆಹಲಿಯಲ್ಲಿ ಸರ್ಕಾರ ರಚಿಸುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ಎಎಪಿ ನಾಯಕ ಕುಮಾರ್ ವಿಶ್ವಾಸ್ ಹೇಳಿದ್ದಾರೆ.

ದೆಹಲಿಯ ಉಪ ರಾಜ್ಯಪಾಲರಾದ ನಜೀಬ್ ಜಂಗ್ ಅವರು ಸರ್ಕಾರ ರಚನೆ ಸಂಬಂಧ ಚರ್ಚಿಸಲು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಿದ್ದು, ಸರ್ಕಾರ ರಚನೆಯ ಕುರಿತು ಇಂದು ಬೆಳಿಗ್ಗೆಯಿಂದಲೇ ಸಭೆ ನಡೆಸುತ್ತಿದ್ದಾರೆ.

ನಾಳೆ ಬೆಳಿಗ್ಗೆ ಅರವಿಂದ್ ಕೇಜ್ರಿವಾಲ್ ಮತ್ತು ಉಪ ರಾಜ್ಯಪಾಲ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಕುರಿತಂತೆ ತಮ್ಮ ನಿಲುವು ಸ್ಪಷ್ಟಪಡಿಸಲಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಿಸಿದ ಬಿಜೆಪಿಗೆ ಉಪ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಆದರೆ ಬಹುಮತ ಇರದ ಕಾರಣ ಬಿಜೆಪಿ ಸರ್ಕಾರ ರಚನೆಯಿಂದ ಹಿಂದೆ ಸರಿದಿತ್ತು. ಹೀಗಾಗಿ ಎರಡನೇ ಅತಿ ದೊಡ್ಡ ಪಕ್ಷವಾದ ಎಎಪಿಗೆ ಸರ್ಕಾರ ರಚನೆ ಮಾಡುವ ಅವಕಾಶ ದೊರಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.