ಎಸ್.ಎಂ.ಕೃಷ್ಣ ನನ್ನ ತಂದೆ ಸಮಾನ: ರಮ್ಯಾ

ಮಂಡ್ಯ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಎಸ್.ಎಂ.ಕೃಷ್ಣ ಅವರು ನನ್ನ ತಂದೆ ಸಮಾನ. ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ನಾನು ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದು ನಟಿ ಹಾಗೂ ಮಂಡ್ಯ ಸಂಸದೆ ರಮ್ಯಾ ಅವರು ಶನಿವಾರ ಹೇಳಿದ್ದಾರೆ.
ಇಂದು ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆತ್ಮಾನಂದ ಅವರ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ರಮ್ಯಾ, ಕೃಷ್ಣ ಅವರು ನನ್ನ ತಂದೆ ಸಮಾನ, ಅವರು ಸ್ಪರ್ಧಿಸುವುದಾದರೇ ನಾನೇ ಕ್ಷೇತ್ರ ತೊರೆಯುತ್ತೇನೆ ಎಂದಿದ್ದಾರೆ.
ಮಂಡ್ಯ ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಎಲ್ಲರೂ ಒಂದಾಗಿದ್ದೇವೆ. ಆದರೆ ಆತ್ಮಾನಂದ ಅವರು ಯಾಕೆ ಈ ರೀತಿ ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ರಮ್ಯಾ ಹೇಳಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಸತಿ ಸಚಿವ ಅಂಬರೀಷ್ ಅವರು, ಮಂಡ್ಯ ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೇಲ್ಲ ಒಗ್ಗಟ್ಟಾಗಿದ್ದೇವೆ. ಎಲ್ಲರು ಒಗ್ಗಟ್ಟಾಗಿರುವುದರಿಂದಲೇ ಕಳೆದ ವಿಧಾನಸಭೆ ಹಾಗೂ ಲೋಕಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಟ್ಟಿಗೆ ದುಡಿಯಬೇಕು. ಹೀಗಾಗಿ ಮಂಡ್ಯದಲ್ಲಿ ಎಸ್.ಎಂ.ಕೃಷ್ಣ, ಆತ್ಮಾನಂದ ಅಥವಾ ರಮ್ಯಾ ಯಾರೇ ಅಭ್ಯರ್ಥಿಯಾದರೂ ನಾವು ಕೆಲಸ ಮಾಡುತ್ತೇವೆ. ಆದರೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಎಸ್.ಎಂ.ಕೃಷ್ಣ ಅವರಂತವರಿಗೆ ಟಿಕೆಟ್ ಕೊಡಿ ಎಂದು ಕೇಳವಷ್ಟು ದೊಡ್ಡವರಲ್ಲ ಎಂದು ವ್ಯಂಗ್ಯವಾಡಿದರು.
ಆತ್ಮಾನಂದ ಅವರು ನಿನ್ನೆ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಮಂಡ್ಯದಿಂದ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೃಷ್ಣ, ಮಂಡ್ಯದಿಂದ ಸ್ಪರ್ಧಿಸುವ ಮನಸ್ಸು ತಮಗೆ ಇಲ್ಲ ಎಂದು ಹೇಳುವ ಮೂಲಕ ಮಂಡ್ಯ ಕಾಂಗ್ರೆಸ್ ಅಧ್ಯಕ್ಷರ ಹಾಗೂ ಮುಖಂಡರ ಮನವಿಯನ್ನು ತಳ್ಳಿಹಾಕಿದ್ದರು.
ಲೋಕಸಭೆ ಚುನಾಣೆಯಲ್ಲಿ ಸ್ಪರ್ಧಿಸಲು ಮನಸ್ಸಿಲ್ಲ ಎಂದ ತಕ್ಷಣ ನಾನು ಪಕ್ಷದಿಂದ ವಿಮುಖನಾಗುತ್ತೇನೆ ಎಂಬ ಭಾವನೆ ಬೇಡ. ಕಾಂಗ್ರೆಸ್ ಪಕ್ಷದಲ್ಲಿ ಮುಂದೆಯೂ ಸಕ್ರಿಯವಾಗಿರುತ್ತೇನೆ ಎಂದು ಕೃಷ್ಣ ಸ್ಪಷ್ಟಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


