ಈಗಿನ ಸುದ್ದಿ

ದೆಹಲಿ ಸರ್ಕಾರ ರಚನೆ ಸಂದಿಗ್ಧ: ರಾಷ್ಟ್ರಪತಿ ಆಳ್ವಿಕೆಗೆ ಚಿಂತನೆ?

Published On :

ನವದೆಹಲಿ: ದೆಹಲಿಯಲ್ಲಿ ಸರ್ಕಾರ ರಚನೆಗೆ ಸಂದಿಗ್ಧ ಸ್ಥಿತಿಯಲ್ಲಿರುವ ಕಾರಣ ರಾಷ್ಟ್ರಪತಿ ಆಳ್ವಿಕೆ ಬಗ್ಗೆ ಹಾಗು ಮೇ ತಿಂಗಳಲ್ಲಿ ಮರು ಚುನಾವಣೆ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ.

2008, ಡಿಸೆಂಬರ್ 18ರಂದು ದೆಹಲಿಯಲ್ಲಿ ಶೀಲಾ ದೀಕ್ಷಿತ್ ಸರ್ಕಾರ ರಚನೆಯಾಗಿದ್ದು, ಇದರಂತೆ ಡಿಸೆಂಬರ್ 18,2013ಕ್ಕೆ ಹೊಸ ಸರ್ಕಾರ ಇಲ್ಲಿ ರಚನೆಯಾಗಬೇಕಾಗಿದೆ. ಆದರೆ ಇದೀಗ ಸರ್ಕಾರ ರಚನೆಗೆ ಆಮ್ ಆದ್ಮಿ ಪಕ್ಷ ಮುಂದಾಗದೇ ಇರುವ ಕಾರಣ ದೆಹಲಿಯಲ್ಲಿ ಸರ್ಕಾರ ರಚನೆ ಇಕ್ಕಟ್ಟಿಗೆ ಸಿಲುಕಿದೆ. ಆಮ್ ಆದ್ಮಿ ಪಕ್ಷಕ್ಕೆ  ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಾಹ್ಯ ಬೆಂಬಲ ನೀಡಲು ಮುಂದಾಗಿದ್ದರೂ ಆಮ್ ಆದ್ಮಿ ಪಕ್ಷ ಹಲವಾರು ಷರತ್ತುಗಳನ್ನು ವಿಧಿಸುವ ಮೂಲಕ ಕಾಲಾವಕಾಶ ಕೋರಿದೆ.

ಸರ್ಕಾರ ರಚನೆಗೆ ವಿಳಂಬವಾಗುತ್ತಿರುವ ಕಾರಣ ದೆಹಲಿಯ ಗವರ್ನರ್ ನಜೀಬ್ ಜಂಗ್, ದೆಹಲಿಯಲ್ಲಿನ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ವಿಸ್ತೃತ ವರದಿಯನ್ನು ಶನಿವಾರ ಸಲ್ಲಿಸಿದ್ದಾರೆ.

ಬಾಹ್ಯ ಬೆಂಬಲ ಘೋಷಿಸಿರುವ ಕಾಂಗ್ರೆಸ್ ಮತ್ತು ಬಿಜೆಪಿ ಮುಂದೆ 18 ಷರತ್ತುಗಳನ್ನಿರಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್, ಉಭಯ ಪಕ್ಷಗಳನ್ನೂ ಬಾಯಿ ಮುಚ್ಚಿಸಿದ್ದಾರೆ.

79 ಸದಸ್ಯರಿರುವ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ 31, ಆಮ್ ಆದ್ಮಿ ಪಕ್ಷ 28 ಸೀಟುಗಳಿಸಿ ಎರಡನೇ ಸ್ಥಾನ ಗಿಟ್ಟಿಸಿಕೊಂಡಿತ್ತು. ಅದೇ ವೇಳೆ ಕಾಂಗ್ರೆಸ್ ಕೇವಲ 8 ಸ್ಥಾನಗಳಿಸಿ ತೃಪ್ತಿ ಪಡಬೇಕಾಯಿತು. ಇದೀಗ ದೆಹಲಿಯಲ್ಲಿ ಸರ್ಕಾರ ರಚಿಸಲು ಆಮ್ ಆದ್ಮಿ ಪಕ್ಷ ಮುಂದೆ ಬರದೇ ಇರುವ ಕಾರಣ ಸದ್ಯ ದೆಹಲಿ ಸರ್ಕಾರ ರಚನೆ ಅತಂತ್ರ ಸ್ಥಿತಿಯಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.