ಈಗಿನ ಸುದ್ದಿ

ರಾಜೀನಾಮೆ ನಿರಾಕರಿಸಿದ ನ್ಯಾ.ಗಂಗೂಲಿ

ರಾಜೀನಾಮೆ ನಿರಾಕರಿಸಿದ ನ್ಯಾ.ಗಂಗೂಲಿ
Published On :

ಕೊಲ್ಕತ್ತಾ: ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಕಾನೂನು ವಿದ್ಯಾರ್ಥಿನಿ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ನ್ನು ಬಹಿರಂಗಗೊಳಿಸಿರುವುದನ್ನು ಪ್ರಶ್ನಿಸಿರುವ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಮಾರ್ತಿ ಎ.ಕೆ ಗಂಗೂಲಿ ಅವರು ಪಶ್ಚಿಮ ಬಂಗಾಳದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ.

ಕಾನೂನು ವಿದ್ಯಾರ್ಥಿನಿಯ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ನ್ನು ಗುಪ್ತವಾಗಿಡಬೇಕಿತ್ತು. ಆದರೆ ಇದನ್ನು ಬಹಿರಂಗ ಪಡಿಸಲಾಗಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಅವರು ಇದನ್ನು ಮಾದ್ಯಮಗಳಿಗೆ ಬಹಿರಂಗ ಪಡಿಸಿದ್ದಾರೆ ಎಂದು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ನ್ಯಾ. ಗಂಗೂಲಿ ಕಿಡಿಕಾರಿದ್ದಾರೆ.

ಸುಪ್ರೀಂಕೋರ್ಟ್ ಈ ಪ್ರಕರಣ ಇತ್ಯರ್ಥ್ಯಗೊಳ್ಳುವವರೆಗೂ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕಾಗಿಲ್ಲ ಎಂದು ಹೇಳಿತ್ತು. ಗಂಗೂಲಿ ಅವರ ಬಳಿ ಕಾನೂನು ಕಲಿಯುತ್ತಿದ್ದ ವಿಧ್ಯಾರ್ಥಿನಿ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪವರಿಸಿದ್ದಾಳೆ.

ಆದರೆ ಆರೋಪವನ್ನು ತಳ್ಳಿ ಹಾಕಿರುವ ಗಂಗೂಲಿ, ನಾನು ವಿದ್ಯಾರ್ಥಿನಿಗೆ ಯಾವುದೇ ರೀತಿಯ ಲೈಂಗಿಕ ಕಿರುಕುಳ ನೀಡಿಲ್ಲ ಎಂದಿದ್ದಾರೆ.

ಇಂದಿರಾ ಜೈಸಿಂಗ್ ಅವರು ಪಶ್ಚಿಮ ಬಂಗಾಳದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಇದಲ್ಲದೇ, ಮಹಿಳಾ ಸಂಘಟನೆಗಳು, ರಾಜಕೀಯ ಪಕ್ಷಗಳು ಗಂಗೂಲಿ ಅವರ ರಾಜಿನಾಮೆಗೆ ಒತ್ತಾಯಿಸಿದ್ದಾರೆ.

ನ್ಯಾ. ಎ.ಕೆ ಗಂಗೂಲಿ ಅವರು ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಗಂಗೂಲಿ ರಾಜಿನಾಮೆಗೆ ಆಗ್ರಹಿಸಿದ್ದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಆಯೋಗದ ಅಧ್ಯಕ್ಷ ಸ್ಥಾನದಿಂದ ಗಂಗೂಲಿಯವರನ್ನು ತೆಗೆದು ಹಾಕುವಂತೆ ಕೋರಿ ಎರಡು ಬಾರಿ ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.