ಲೋಕಪಾಲ ಬಿಲ್ ಜಾರಿಗಾಗಿ ಅಧಿವೇಶನ ವಿಸ್ತರಿಸಲು ಸಿದ್ಧ: ಕಮಲ್ನಾಥ್
ನವದೆಹಲಿ: "ಬೇಕಾದರೆ ಲೋಕಪಾಲ ಮಸೂದೆ ಜಾರಿಗಾಗಿ ಚಳಿಗಾಲದ ಅಧಿವೇಶನವನ್ನು ವಿಸ್ತರಿಸಲು ಸಿದ್ಧ" ಎಂದು ಕೇಂದ್ರ ಸಚಿವ ಕಮಲ್ ನಾಥ್ ಸೋಮವಾರ ಹೇಳಿದ್ದಾರೆ.
ಲೋಕಪಾಲ ಮಸೂದೆ ಮಂಡನೆ ಸಂದಂರ್ಭದಲ್ಲಿ ರಾಜ್ಯಸಭೆಯಲ್ಲಿ ಗದ್ದಲ ಉಂಟಾದ್ದರಿಂದ ಕಲಾಪವನ್ನು ಮುಂದೂಡಲಾಯಿತು. ಈ ಬಾರಿ ಅಧಿವೇಶದಲ್ಲಿಯೂ ಲೋಕಪಾಲ್ ಮಸೂದೆ ಮಂಡನೆಯಾಗುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು.
ಇದಕ್ಕೆ ಪ್ರತಿಕ್ರಿಯಿಸಿರುವ ಕಮಲ್ನಾಥ್, ನಮಗೆ ಎಲ್ಲಾ ಪಕ್ಷಗಳಿಂದ ಮಸೂದೆ ಜಾರಿಗೆ ಬೆಂಬಲ ದೊರತರೆ, ಬೇಕಾದರೆ ಚಳಿಗಾಲದ ಅಧಿವೇಶನವನ್ನು ವಿಸ್ತರಿಸಲು ಸಿದ್ದ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಸದಸ್ಯರು ಮಸೂದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕಮಲ್ನಾಥ್ ಅವರು, ಲೋಕಪಾಲ್ ಮಸೂದೆ ಜಾರಿಗೆ ಸಮಾಜವಾದಿ ಪಕ್ಷ ಬೆಂಬಲಿಸಬೇಕು ಎಂದು ರಾಜ್ಯಸಭೆಯಲ್ಲಿ ಮನವಿ ಮಾಡಿದರು.
ಮೊದಲಿಗೆ ಮೇಲ್ಮಮನೆಯಲ್ಲಿ ಮಸೂದೆ ಜಾರಿಯಾಗಬೇಕು, ನಂತರ ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಕಮಲ್ನಾಥ್ ವರದಿಗಾರರಿಗೆ ತಿಳಿಸಿದ್ದಾರೆ.
ನಾನು ಸಮಾಜವಾದಿ ಪಕ್ಷದ ಸದಸ್ಯರಲ್ಲಿ ವಿನಂತಿಸಿಕೊಳ್ಳುತ್ತೇನೆ, ದಯವಿಟ್ಟು ಮಸೂದೆ ಜಾರಿಗೆ ಬೆಂಬಲಿಸಿ. ದೇಶದ ಎಲ್ಲಾ ಜನತೆ ಮಸೂದೆ ಜಾರಿಗೆ ಆಗ್ರಹಿಸುತ್ತಿದ್ದಾರೆ. ಇದನ್ನು ಸಮಾಜವಾದಿ ಪಕ್ಷ ಕಡೆಗಣಿಸಬಾರದು ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

