ನ್ಯಾ. ಗಂಗೂಲಿ ರಾಜೀನಾಮೆಗೆ ಹೆಚ್ಚಿದ ಒತ್ತಾಯ
ನವದೆಹಲಿ/ ಕೊಲ್ಕತ್ತಾ: ಯುವ ವಕೀಲೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ನ್ಯಾಯಮೂರ್ತಿ ಎ.ಕೆ ಗಂಗೂಲಿ ಪಶ್ಚಿಮ ಬಂಗಾಳ ಮಾನವ ಹಕ್ಕು ಆಯೋಗದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಡ ಹೆಚ್ಚಾಗುತ್ತಿದೆ.
ಗಂಗೂಲಿಯವರ ಸಮಯ ಮುಗಿದಿದೆ, ಅವರೀಗ ಪದತ್ಯಾಗ ಮಾಡಬೇಕಾಗಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರಿಕ್ ಓ ಬ್ರೈನ್ ಹೇಳಿದ್ದಾರೆ.
ಇದೀಗ ಗಂಗೂಲಿ ಅವರ ಮುಂದೆ ರಾಜಿನಾಮೆ ನೀಡುವುದು ಇಲ್ಲವೇ ರಾಷ್ಟ್ರಪತಿ ಅವರಿಂದ ವಜಾಗೊಳಿಸುವುದು ಇವೆರಡೇ ಆಯ್ಕೆಗಳು ಉಳಿದಿವೆ ಎಂದು ಓ ಬ್ರೈನ್ ಹೇಳಿದ್ದಾರೆ.
ಸೋಮವಾರ ಸುಪ್ರೀಂಕೋರ್ಟ್ ತನಿಖಾ ಸಮಿತಿಗೆ ಯುವ ವಕೀಲೆ ನೀಡಿದ ಹೇಳಿಕೆಯನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಬಹಿರಂಗಗೊಳಿಸಿದ್ದರು. ಅದರಲ್ಲಿ ನ್ಯಾ. ಗಂಗೂಲಿ ತನ್ನ ಕೈಗೆ ಮುತ್ತಿಕ್ಕಿದ್ದಾರೆ. ಮಾತ್ರವಲ್ಲದೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದಾರೆ .
ನ್ಯಾ. ಗಂಗೂಲಿ ರಾಜಿನಾಮೆ ನೀಡದೇ ಇದ್ದರೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ರಾಷ್ಟ್ರಪತಿಗೆ ಮನವಿ ಮಾಡುವುದಾಗಿಯೂ ಜೈಸಿಂಗ್ ಹೇಳಿದ್ದಾರೆ.
ಏತನ್ಮಧ್ಯೆ, ಗಂಗೂಲಿ ಅವರನ್ನು ವಜಾಗೊಳಿಸಬೇಕೆಂದು ಬಿಜೆಪಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಮನವಿ ಸಲ್ಲಿಸಿದ್ದು, ಗಂಗೂಲಿ ಅವರು ಪದತ್ಯಾಗ ಮಾಡಲೇ ಬೇಕು ಎಂದು ಕಾನೂನು ಸಚಿವ ಕಪಿಲ್ ಸಿಬಲ್ ಕೂಡಾ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

