ಈಗಿನ ಸುದ್ದಿ

ಎಎಪಿ ಮಾವೋ ಸಿದ್ಧಾಂತ ಪಾಲಿಸುತ್ತಿದೆ: ಗಡ್ಕರಿ ಆರೋಪ

Published On :

ನವದೆಹಲಿ: ದೆಹಲಿಯಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಟೀಕಾ ಪ್ರಹಾರ ಮಾಡಿದ ಬಿಜೆಪಿ ನಾಯಕ ನಿತಿನ್ ಗಡ್ಕರಿ, ಎಎಪಿ ಪಕ್ಷದ ನಾಯಕರು ಗೊಂದಲದಲ್ಲಿದ್ದಾರೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದ ಗಡ್ಕರಿ, ಆಮ್ ಆದ್ಮಿ ಪಕ್ಷ ಗೊಂದಲಗೊಂಡಿರುವ ನಾಯಕರ ಪಕ್ಷವಾಗಿದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದ ವಿರುದ್ಧ ಕಿಡಿ ಕಾರಿದ ಅವರು ದೆಹಲಿಯಲ್ಲಿ ಸರ್ಕಾರ ರಚಿಸಬೇಕೆಂದಿದ್ದರೆ ಅವರು ರಚಿಸಲಿ. ಇಲ್ಲವೆಂದಾದರೆ ಅದನ್ನು ಸ್ಪಷ್ಟವಾಗಿ ಹೇಳಲಿ ಎಂದಿದ್ದಾರೆ. ಮಾತ್ರವಲ್ಲದೆ ಎಎಪಿ ಮಾವೋ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಗಡ್ಕರಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಎಎಪಿ ಸರ್ಕಾರ ರಚಿಸಬೇಕೋ ಬೇಡವೋ ಎಂಬುದನ್ನು ದೆಹಲಿಯ ಜನರು  ನಿರ್ಧರಿಸಬೇಕು. ಅದಕ್ಕಾಗಿ  ಜನಾಭಿಪ್ರಾಯದ ಮೊರೆ ಹೋಗಿರುವ ಕೇಜ್ರಿವಾಲ್ ನಿರ್ಧಾರದ ಬಗ್ಗೆ ಗಡ್ಕರಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.