ಅಮಾನವೀಯ ವರ್ತನೆಗೆ ಅಮೆರಿಕ ಕ್ಷಮೆಯಾಚಿಸಬೇಕು; ಕಮಲ್‌ನಾಥ್

ನವದೆಹಲಿ: ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಬಂಧಿಸಿ, ಅವರನ್ನು ವಿವಸ್ತ್ರಗೊಳಿಸಿ ತಪಾಸಣೆ ನಡೆಸಿದ ಅಮಾನವೀಯ ವರ್ತನೆಗೆ ಅಮೆರಿಕ ಕ್ಷಮೆಯಾಚಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಮಲ್ ನಾಥ್ ಅವರು ಗುರುವಾರ ಆಗ್ರಹಿಸಿದ್ದಾರೆ.
ಅಮೆರಿಕ ರಾಜ್ಯ ಕಾರ್ಯದರ್ಶಿ ಜಾನ್ ಕೆರ್ರಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೇನನ್ ಅವರಿಗೆ ಕರೆ ಮಾಡಿ, ದೇವಯಾನಿ ಬಂಧನದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಮಲ್ ನಾಥ್, ಬರೀ ವಿಷಾದ ವ್ಯಕ್ತಪಡಿಸಿದರೆ ಸಾಲದು. ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಶಿಷ್ಟಾಚಾರಕ್ಕಾಗಿ ವಿಷಾದ ವ್ಯಕ್ತಪಡಿಸಿದರೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದು ನಮಗೆ ತೃಪ್ತಿ ತಂದಿಲ್ಲ. ಅವರು ಅಮಾನವೀಯವಾಗಿ ನಡೆದುಕೊಂಡ ಬಗ್ಗೆ ಕ್ಷಯೆಯಾಚಿಸಲೇ ಬೇಕು ಎಂದು ಕಮಲ್ ನಾಥ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಪ್ರಕರಣ ಏನು?: ವೀಸಾ ವಂಚನೆ, ಮನೆಗೆಲಸದಾಕೆಗೆ ಕಡಿಮೆ ಸಂಬಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೇವಯಾನಿ ಅವರನ್ನು 5 ದಿನಗಳ ಹಿಂದೆ ನ್ಯೂಯಾರ್ಕ್ ಪೊಲೀಸರು ಸಾರ್ವಜನಿಕವಾಗಿ ಬಂಧಿಸಿದ್ದರು. ವಿವಸ್ತ್ರಗೊಳಿಸಿ ತಪಾಸಣೆ ನಡೆಸಿದ್ದ ಪೊಲೀಸರು ಬಳಿಕ ಮಾದಕ ವಸ್ತು ವ್ಯಸನಿಗಳ ಸೆಲ್‌ನಲ್ಲಿ ಕೂಡಿ ಹಾಕಿದ್ದರು. ಪೊಲೀಸರ ಈ ಕ್ರಮಕ್ಕೆ ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅಮೆರಿಕದ ರಾಯಭಾರಿ ನ್ಯಾನ್ಸಿ ಪೊವೆಲ್‌ರನ್ನು ಕರೆಸುವ ಮೂಲಕ ಪ್ರತಿಭಟನೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


