ಎಎಪಿ ಅಧಿಕಾರಕ್ಕೇರಲು ಕಾಂಗ್ರೆಸ್, ಬಿಜೆಪಿ ಬಯಕೆ?
ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಗದ್ದುಗೇರುವುದನ್ನು ಕಾಣಲು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಆಶಿಸಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚನೆ ಮಾಡಬೇಕೆ? ಎಂದು ಅರವಿಂದ್ ಕೇಜ್ರಿವಾಲ್ ಜನಾಭಿಪ್ರಾಯ ಕೇಳಿದ್ದರು. ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದೆಹಲಿಯ ಜನರು ಕೇಜ್ರಿವಾಲ್ಗೆ ಬೆಂಬಲ ನೀಡಲಿ ಎಂದು ಆಶಿಸುತ್ತಿದ್ದಾರಂತೆ.
ದೆಹಲಿಯ ಹಿಂದೀ ಸುದ್ದಿಪತ್ರಿಕೆಯೊಂದು ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಎಎಪಿ ಹಮ್ಮಿಕೊಂಡಿರುವ ಜನಾಭಿಪ್ರಾಯದಲ್ಲಿ ಪಾಲ್ಗೊಳ್ಳುವಂತೆ ದೆಹಲಿ ನಾಗರಿಕರನ್ನು ಹುರಿದುಂಬಿಸುತ್ತಿವೆ ಎಂದು ಸುದ್ದಿ ಮಾಡಿದೆ.
ಏತನ್ಮಧ್ಯೆ, ಭಾನುವಾರ ರಾತ್ರಿ ವರೆಗೂ ಜನಾಭಿಪ್ರಾಯ ಸಂಗ್ರಹಿಸಲಾಗುವುದು, ಇದರ ಫಲಿತಾಂಶವನ್ನು ಡಿ.23 ಬೆಳಗ್ಗೆ ಪ್ರಕಟಿಸಲಾಗುವುದು ಎಂದು ಎಎಪಿ ಹೇಳಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

