ಈಗಿನ ಸುದ್ದಿ

ಗೋಯಲ್‌ ಗೋಲ್‌ಮಾಲ್: ಲೋಕಾಯುಕ್ತ ತನಿಖೆಗೆ ಜೆಡಿಎಸ್ ಆಗ್ರಹ

ಗೋಯಲ್‌ ಗೋಲ್‌ಮಾಲ್: ಲೋಕಾಯುಕ್ತ ತನಿಖೆಗೆ ಜೆಡಿಎಸ್ ಆಗ್ರಹ
Published On :

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು 90 ಉಪನ್ಯಾಸಕರಿಗೆ ಕಾನೂನು ಬಾಹಿರ ಬಡ್ತಿ ನೀಡಿ, ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿರುವ ಜೆಡಿಎಸ್, ಅವರ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ಗುರುವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಈ ಸಂಬಂಧ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಹಾಗೂ ಮರಿತಿಬ್ಬೇಗೌಡ ಅವರು, ಗೋಯಲ್ ಅವರು 2010ನೇ ಸಾಲಿನಲ್ಲಿ 90 ಉಪನ್ಯಾಸಕರಿಗೆ ಕಾನೂನು ಬಾಹಿರ ಬಡ್ತಿ ನೀಡಿದ್ದಾರೆ. ಅಲ್ಲದೆ ಬಡ್ತಿ ವೇತನಕ್ಕಾಗಿ 12 ಕೋಟಿ ಬಿಡುಗಡೆ ಮಾಡಿ, ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಗೋಯಲ್ ಕಿಕ್ ಬ್ಯಾಕ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಮತ್ತು ಈ ಕೂಡಲೇ ಅವರನ್ನು ಬಂಧಿಸಿ ಮಂಪರು ಪರೀಕ್ಷೆಗೊಳಪಡಿಸಬೇಕು ಎಂದು ಜೆಡಿಎಸ್ ಪರಿಷತ್ ಸದಸ್ಯರು ಒತ್ತಾಯಿಸಿದ್ದಾರೆ.

ಈ ಪ್ರಕರಣವನ್ನು ಡಿಸೆಂಬರ್ 21ರೊಳಗೆ ಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು. ಇಲ್ಲದಿದ್ದರೆ ಡಿಸೆಂಬರ್ 22ರಿಂದ ಮುಖ್ಯಮಂತ್ರಿಗಳ ವಿಧಾನಸೌಧದ ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಜೆಡಿಎಸ್ ಎಚ್ಚರಿಸಿದೆ.

ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಮರಿತಿಬ್ಬೇಗೌಡ ಅವರು, ದೇಶಪಾಂಡೆ ಒಬ್ಬ ಭ್ರಷ್ಟ ಸಚಿವ. ಗೋಯಲ್ ಅವರು ದೇಶಪಾಂಡೆಯ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶಪಾಂಡೆಯನ್ನು ಸಚಿವ ಸಂಪುಟದಿಂದ ವಜಾ ಮಾಡಿ, ಉನ್ನತ ಶಿಕ್ಷಣ ಇಲಾಖೆಯನ್ನು ಭ್ರಷ್ಟಾಚಾರದಿಂದ ರಕ್ಷಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.