ಈಗಿನ ಸುದ್ದಿ

ಕ್ಷಮೆನೂ ಕೇಳಲ್ಲ, ಕೇಸೂ ವಾಪಸ್ ಪಡೆಯಲ್ಲ: ಅಮೆರಿಕ

ಕ್ಷಮೆನೂ ಕೇಳಲ್ಲ, ಕೇಸೂ ವಾಪಸ್ ಪಡೆಯಲ್ಲ: ಅಮೆರಿಕ
Published On :

ವಾಷಿಂಗ್ಟನ್: ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಜತೆಗಿನ ಅಮಾನವೀಯ ವರ್ತನೆಗೆ ಕ್ಷಮೆ ಕೇಳಬೇಕು ಮತ್ತು ಅವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬ ಭಾರತದ ಆಗ್ರಹವನ್ನು ಅಮೆರಿಕ ಸ್ಪಷ್ಟವಾಗಿ ತಳ್ಳಿಹಾಕಿದೆ.

'ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ದೇವಯಾನಿ ಅವರ ಮೇಲಿನ ಆರೋಪಗಳಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದು ಕಾನೂನಿಗೆ ಸಂಬಂಧಿಸಿದ ವಿಚಾರ' ಎಂದು ಅಮರಿಕ ರಾಜ್ಯ ವಕ್ತಾರ ಮರಿಯಾ ಹರ್ಫ್ ಅವರು ತಿಳಿಸಿದ್ದಾರೆ.

ದೇವಯಾನಿ ಅವರಿಗೆ ಶಿಕ್ಷೆಯಿಂದ ವಿನಾಯ್ತಿ ನೀಡುತ್ತಿರಾ ಮತ್ತು ಅಮೆರಿಕ ನ್ಯಾಯಾಲಯದಲ್ಲಿ ಅವರ ಮೇಲಿನ ಆರೋಪಗಳನ್ನು ಕೈ ಬಿಡುತ್ತಿರಾ ಎಂಬ ವರದಿಗಾರರ ಪ್ರಶ್ನೆಗೆ, ಇಲ್ಲ. ಯಾರೂ ಆರೋಪಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಉತ್ತರಿಸಿದರು.

ಭಾರತೀಯ ರಾಜತಾಂತ್ರಿಕ ಅಧಿಕಾರಿಯ ವಿರುದ್ಧದ ಆರೋಪಗಳನ್ನು ಕೈಬಿಡಲು ನಿರಾಕರಿಸಿದ ಹರ್ಫ್, ದೇವಯಾನಿ ವಿರುದ್ಧದ ದೂರಿನ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಹೀಗಾಗಿ ನಾನು ಆ ಬಗ್ಗೆ ಏನನ್ನು ಹೇಳುವುದಿಲ್ಲ ಎಂದಿದ್ದಾರೆ.

ಸಾಮಾನ್ಯವಾಗಿ ಇಂತಹ ಪ್ರಕರಣಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಮತ್ತು ಕಾನೂನು ಕ್ರಮ ಜರುಗಿಸಬೇಕೋ ಅಥವಾ ಬೆಡವೋ ಎಂಬುದು ತಮ್ಮ ನಿರ್ಧಾರಕ್ಕೆ ಬರುವುದಿಲ್ಲ ಎಂದು ಹರ್ಫ್ ಹೇಳಿದ್ದಾರೆ.

ದೇವಯಾನಿ ಜತೆಗಿನ ಅಮಾನವೀಯ ವರ್ತನೆಗೆ ಅಮೆರಿಕ ವಿಷಾದ ವ್ಯಕ್ತಪಡಿಸಿತ್ತು. ಇದನ್ನು ತಿರಸ್ಕರಿಸಿದ್ದ ಭಾರತ, ವಿಷಾದ ವ್ಯಕ್ತಪಡಿಸಿದರೆ ಸಾಲದು ಅಮೆರಿಕ ತನ್ನ ತಪ್ಪಿಗಾಗಿ ಕ್ಷಮೆ ಕೋರಬೇಕು ಎಂದು ಪಟ್ಟುಹಿಡಿದಿದೆ. ಜತೆಗೆ, ದೇವಯಾನಿ ವಿರುದ್ಧ ದಾಖಲಿಸಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯುವಂತೆಯೂ ಭಾರತ ಒತ್ತಾಯಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.