ಸಲಿಂಗಾಪರಾಧ: ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಕೇಂದ್ರ

ನವದೆಹಲಿ: ಸಲಿಂಗಿಗಳ ನಡುವಿನ ಸಮ್ಮತಿಯ ಲೈಂಗಿಕ ಕ್ರಿಯೆಯನ್ನು ಅಪರಾಧ ಎಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಶುಕ್ರವಾರ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.
ಸಲಿಂಗಕಾಮ ಅಪರಾಧವನ್ನಾಗಿ ತೀರ್ಮಾನಿಸುವ ಭಾರತೀಯ ದಂಡ ಸಂಹಿತೆ 377ನೇ ಕಲಂನಂತೆ ಸಲಿಂಗಿಗಳ ಸಂಬಂಧಕ್ಕೆ ಕಾನೂನು ಸಮ್ಮತಿ ನೀಡುವುದಿಲ್ಲ ಎಂಬ ತೀರ್ಪುನ್ನು ಕೋರ್ಟ್ ಮರು ಪರಿಶೀಲಿಸಬೇಕು ಎಂದು ಕೇಂದ್ರ ಮನವಿ ಮಾಡಿದೆ.
ಈ ಕುರಿತು ಟ್ವಿಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಕಪಿಲ್ ಸಿಬಲ್ ಅವರು, ಕಲಂ 377ರ ವಿರುದ್ಧ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.
ಸಮ್ಮತಿಯ ಸಲಿಂಗಕಾಮವನ್ನು ಕಾನೂನುಬದ್ಧಗೊಳಿಸಿ ದೆಹಲಿ ಹೈಕೋರ್ಟ್ 2009ರಲ್ಲಿ ನೀಡಿದ್ದ ತೀರ್ಪನ್ನು ತಳ್ಳಿಹಾಕಿದ ನ್ಯಾ. ಜಿ.ಎಸ್. ಸಿಂಘ್ವಿ ಮತ್ತು ಎಸ್. ಜೆ. ಮುಖ್ಯೋಪಾಧ್ಯಾಯ ಅವರಿದ್ದ ಪೀಠ ಈ ತೀರ್ಪು ನೀಡಿದೆ. ಇದೇ ವೇಳೆ, ಸಲಿಂಗಕಾಮ ಕಾನೂನು ಸಮ್ಮತಿ ನೀಡಬೇಕೇ, ಬೇಡವೇ ಎನ್ನುವ ಕುರಿತು ಸಂಸತ್ತು ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬರಲಿ ಎಂದಿದ್ದರು.
ಸಲಿಂಗಕಾಮ ಅಪರಾಧವನ್ನಾಗಿ ತೀರ್ಮಾನಿಸುವ ಭಾರತೀಯ ದಂಡ ಸಂಹಿತೆಯ 377ನೇ ಕಲಂ ಅನ್ನು ರದ್ದುಪಡಿಸುವ ಹಕ್ಕು ಸಂಸತ್ತಿಗಷ್ಟೇ ಇದೆ. ಹಾಗಾಗಿ ಸದ್ಯ 377ನೇ ಕಲಂನಂತೆ ಈ ರೀತಿಯ ಲೈಂಗಿಕ ಸಂಬಂಧಕ್ಕೆ ಕಾನೂನು ಸಮ್ಮತಿ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸಲಿಂಗರತಿಯನ್ನು ಕಾನೂನುಬದ್ಧಗೊಳಿಸುವಂಥ ವಿವಾದಾತ್ಮಕ ವಿಚಾರವನ್ನು ಲಘುವಾಗಿ ತೆಗೆದುಕೊಂಡ ಕೇಂದ್ರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು.
377 ನೇ ಕಲಂ ಏನು ಹೇಳುತ್ತೆ?
ಐಪಿಸಿ ಕಲಂ 377 ಅಸಹಜ ಅಪರಾಧಗಳ ಕುರಿತು ವಿವರಿಸುತ್ತದೆ. ನಿಸರ್ಗಕ್ಕೆ ವಿರುದ್ಧವಾಗಿ ಪುರುಷ, ಮಹಿಳೆ ಅಥವಾ ಪ್ರಾಣಿಗಳ ಜತೆಗೆ ಲೈಂಗಿಕ ಕ್ರಿಯೆ ನಡೆಸುವವರ ವಿರುದ್ಧ ಜೀವಾವಧಿ ಶಿಕ್ಷೆ ಅಥವಾ 10 ವರ್ಷದ ವರೆಗೆ ಜೈಲು ಮತ್ತು ದಂಡ ಶಿಕ್ಷೆ ವಿಧಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


