ಈಗಿನ ಸುದ್ದಿ

ಬಿಜೆಪಿ ಜತೆ ಮೈತ್ರಿ ಮಾಡಲ್ಲ: ಕರುಣಾನಿಧಿ

Published On :

ನವದೆಹಲಿ: ಡಿಎಂಕೆ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂಬ ಮಾಧ್ಯಮಗಳ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ, ತಾವು ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಜತೆಗಿನ ಮೈತ್ರಿ ಸುದ್ದಿಯನ್ನು ನಿರಾಕರಿಸಿದ ಅವರು ತಮ್ಮೊಂದಿಗೆ ಈಗ ಇರುವ ಮೈತ್ರಿ ಪಕ್ಷಗಳ ಜತೆಗೆ ಲೋಕಸಭಾ ಚುನಾವಣೆಯನ್ನೆದುರಿಸುವುದಾಗಿ  ಹೇಳಿದ್ದಾರೆ.

ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆನೀಡಿದ ಕರುಣಾ, ಮಾಧ್ಯಮದವರು ತಮ್ಮ ಲಾಭಕ್ಕಾಗಿ ಸತ್ಯವನ್ನು ತಿರುಚಬಾರದು. ಇದು ಕ್ಷಮಾರ್ಹವಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಡಿಎಂಕೆ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆಯೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಈಗಾಗಲೇ ಮುಸ್ಲಿಂ ಲೀಗ್, ವಿದುತಲೈ ಚಿರುತೈಗಲ್ ಕಾಟ್ಚಿ, ಮನಿಧನೇಯ ಮಕ್ಕಳ್ ಕಾಟ್ಚಿ ಮತ್ತು ಪುತಿಯ ತಮಿಳಗಂ ಮೊದಲಾದ ಪಕ್ಷಗಳೊಂದಿಗೆ ಮೈತ್ರಿ ಮಾಡಿದ್ದೇವೆ. ನಾವು ಅವರ ಜತೆಗೂಡಿಯೇ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ನಟ ವಿಜಯಕಾಂತ್ ಅವರ ಡಿಎಂಡಿಕೆ ಪಕ್ಷ ಡಿಎಂಕೆ ಜತೆ ಮೈತ್ರಿ ಮಾಡಿಕೊಳ್ಳುವುದೇ? ಎಂಬ ಪ್ರಶ್ನೆಗೆ ನನಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದು ಕರುಣಾ ಉತ್ತರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.