ಕಿಚ್ಲೂಗೆ ಕ್ಲೀನ್‌ಚಿಟ್: ಬಿಜೆಪಿ ಪ್ರತಿಭಟನೆ
ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಕಿಶ್ತ್‌ವಾರ್ ಗಲಭೆಯ ತನಿಖೆ ನಡೆಸಿದ ನ್ಯಾಯಮೂರ್ತಿ ಆರ್. ಸಿ ಗಾಂಧಿ ಕಮಿಷನ್, ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಸಜ್ಜದ್ ಅಹ್ಮದ್ ಕಿಚ್ಲೂ ಅವರಿಗೆ ಕ್ಲೀನ್‌ಚಿಟ್ ನೀಡಿರುವುದನ್ನು ಬಿಜೆಪಿ ಪ್ರಶ್ನಿಸಿದೆ.
ಜಮ್ಮು ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಡಿಸೆಂಬರ್ 9, ಈದ್ ಉಲ್ ಫಿತರ್ ದಿನದಂದು ಕೋಮುಗಲಭೆ ಸಂಭವಿಸಿತ್ತು. ಈ ಗಲಭೆ ಬಗ್ಗೆ ನ್ಯಾಯಾಂಗ ತನಿಖೆಗೆ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆದೇಶಿಸಿದ್ದರು. ಅದೇ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಖಾತೆ ಸಹಾಯಕ ಸಚಿವ ಕಿಚ್ಲೂ ರಾಜಿನಾಮೆ ನೀಡಿದ್ದರು.
ಪ್ರಸ್ತುತ ಗಲಭೆಯ ಬಗ್ಗೆ ತನಿಖೆ ನಡೆಸಿದ ನ್ಯಾ. ಆರ್.ಸಿ. ಗಾಂಧಿ ಕಮಿಷನ್ ಕಿಚ್ಲೂಗೆ ಕ್ಲೀನ್‌ಚಿಟ್ ನೀಡಿದ್ದನ್ನು ವಿರೋಧಿಸಿ ಇದೀಗ ಬಿಜೆಪಿ ಪ್ರತಿಭಟನೆ ನಡೆಸಿದೆ.
ಜಮ್ಮುನ ಪಟೌಲಿಯಲ್ಲಿರುವ ನ್ಯಾ. ಗಾಂಧಿಯವರ ನಿವಾಸದೆದರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದು ಮಾತ್ರವಲ್ಲದೆ ರಾಜಭವನದೆದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಕಿಚ್ಲೂ ಅವರಿಗೆ ಕ್ಲೀನ್‌ಚಿಟ್ ನೀಡಿರುವ ಉದ್ದೇಶದ ಬಗ್ಗೆ ವಿವರಣೆ ನೀಡಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಬಿಜೆಪಿಯ ದೇಶಿಯ ಕಾರ್ಯಕಾರೀ ಸಮಿತಿಯ ಸದಸ್ಯ ಡಾ.ಜಿತೇಂದರ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

