ಭ್ರಷ್ಟಾಚಾರ ದೇಶದ ದೊಡ್ಡ ಸಮಸ್ಯೆ: ರಾಹುಲ್ ಗಾಂಧಿ

ನವದೆಹಲಿ: ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಐಸಿಸಿಐ)ಯ ವಾರ್ಷಿಕ ಮಹಾಸಭೆಯ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭಾರತ ಇಂದು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಭ್ರಷ್ಟಾಚಾರ ಮುಖ್ಯವಾದುದು ಎಂದು ಹೇಳಿದ್ದಾರೆ.
ನಮ್ಮ ದೇಶದ ಬಹುದೊಡ್ಡ ಸಮಸ್ಯೆ ಎಂದರೆ ಅದು ಭ್ರಷ್ಟಾಚಾರ. ಇದು ಎಂದೂ ಸ್ವೀಕಾರ ಅರ್ಹವಲ್ಲ ಎಂದು ರಾಹುಲ್ ಹೇಳಿದ್ದಾರೆ. ಯುಪಿಎ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಹಲವಾರು ಸವಾಲುಗಳನ್ನು ಎದುರಿಸಬೇಕಾಗಿ ಬಂದಿದೆ ಎಂದು ಅವರು ಹೇಳಿದ್ದಾರೆ.
ನಾವು ಕಳಂಕಿತ ಸಂಸದರನ್ನು ಸಂಸತ್‌ನಿಂದ ಹೊರಗಿಡಲು ಯತ್ನಿಸಿದ್ದೇವೆ. ಮಾತ್ರವಲ್ಲದೆ ಅಪರಾಧಿಗಳನ್ನು ಪಕ್ಷದಿಂದಲೇ ಹೊರಗಿಟ್ಟಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.
30 ನಿಮಿಷಗಳ ಕಾಲ ಭಾಷಣ ಮಾಡಿದ ರಾಹುಲ್ ತಮ್ಮ ಪಕ್ಷ ಮತ್ತು ಎಫ್‌ಐಸಿಸಿಐ ನಡುವಿನ ಸಂಬಂಧದ ಬಗ್ಗೆ ವಿವರಿಸಿದ್ದಾರೆ. ಎಫ್‌ಐಸಿಸಿಐ ನಲ್ಲಿ ಮಹಾತ್ಮಾಗಾಂಧಿ ಮಾತನಾಡಿದ ಅಂದಿನಿಂದಲೇ ನಮ್ಮ ಪಕ್ಷ ಮತ್ತು ಪ್ರಸ್ತುತ ಸಂಸ್ಥೆಯೊಂದಿಗೆ ನಮ್ಮ ಒಡನಾಟ ಬೆಳೆದಿದೆ ಎಂದು ಅವರು ಹೇಳಿದ್ದಾರೆ.
ಏತನ್ಮಧ್ಯೆ, ಏಳಿಗೆಯಿಲ್ಲದೆ ಬಡತನದ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಈ ಹತ್ತು ವರ್ಷಗಳಲ್ಲಿ ದೇಶದ ಜನಸಂಖ್ಯೆಯಲ್ಲಿ ಮೂರನೇ ಒಂದಶದಷ್ಟು ಜನರ ಬಡತನ ನೀಗಿದೆ ಎಂದು ರಾಹುಲ್ ನುಡಿದಿದ್ದಾರೆ.
ಸರ್ಕಾರದ ಉದ್ಯೋಗ ಖಾತ್ರಿ ಯೋಜನೆ, ಆಹಾರ ಭದ್ರತಾ ನಿಯಮ ಮತ್ತು ಭೂ ಸ್ವಾಧೀನ ನಿಯಮದ ಬಗ್ಗೆಯೂ ರಾಹುಲ್ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


