ಆರ್ಜೆಡಿ ಜತೆ ಕಾಂಗ್ರೆಸ್ ಮೈತ್ರಿ: ಬಿಜೆಪಿ ವಾಗ್ದಾಳಿ
ನವದೆಹಲಿ: ಆರ್ಜೆಡಿ ಜತೆ ಕೈ ಜೋಡಿಸಲು ಮುಂದಾಗಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ , ಬಿಜೆಪಿಯಲ್ಲಿ ಯಡಿಯೂರಪ್ಪರಂತ ಕಳಂಕ ನಾಯಕರಿದ್ದಾರೆ ಎಂದು ಕಾಂಗ್ರೆಸ್ ಬಿಜೆಪಿಗೆ ಎದಿರೇಟು ನೀಡಿದೆ.
ಕಾಂಗ್ರೆಸ್ ದೆಹಲಿಯಲ್ಲಿ ಕೇಜ್ರಿವಾಲ್ಗೆ ಬೆಂಬಲ ನೀಡಿದರೆ, ಪಾಟ್ನಾದಲ್ಲಿ ಲಾಲುಗೆ ಬೆಂಬಲ ನೀಡುತ್ತಿದೆ. ಎಂಥಾ ವಿರೋಧಾಭಾಸ ಇದು ಎಂದು ಗುರುವಾರ ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದರು.
ಈ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶಕೀಲ್ ಅಹ್ಮದ್, ಈ ಹಿಂದೆ ಭ್ರಷ್ಟಾಚಾರದ ಆರೋಪದಲ್ಲಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಮತ್ತೆ ಕರೆತರಲು ಯತ್ನಿಸುವುದು ನಾಚಿಕೆಗೇಡು ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಎನ್ಡಿಎಯೊಂದಿಗೆ ಮೈತ್ರಿಹೊಂದಿದ್ದ ಐಎನ್ಎಲ್ಡಿ ಪಕ್ಷದ ಚೌಟಾಲ ಕುಟುಂಬದೊಂದಿಗೆ ಬಿಜೆಪಿಗೆ ಸಂಪರ್ಕ ಇದೆ. ಐಎನ್ಎಲ್ಡಿ ಮುಖ್ಯಸ್ಥ ಓಂ ಪ್ರಕಾಶ್ ಚೌಟಾಲಾ ಮತ್ತು ಆತನ ಪುತ್ರ ಅಜಯ್ ಚೌಟಾಲ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದಾರೆ ಎಂಬ ವಿಷಯವನ್ನು ಅಹ್ಮದ್ ಒತ್ತಿ ಹೇಳಿದ್ದಾಕೆ.
ಜೇಟ್ಲಿ ಅವರು ಕಾಂಗ್ರೆಸ್ನ ಅಭಿವೃದ್ಧಿ ಮತ್ತು ಆರ್ಜೆಡಿನ ಮೈತ್ರಿ ಬಗ್ಗೆ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ. ಆದರೆ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪರಂತ ಕಳಂಕಿತ ನಾಯಕ ಹಾಗು ಎನ್ಡಿಎಯಲ್ಲಿ ಚೌಟಾಲ ಇದ್ದಾರೆ ಎಂಬುದನ್ನು ಮರೆಯಬಾರದು ಎಂದು ಅಹ್ಮದ್ ಟ್ವೀಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

