ಸರ್ಕಾರ ರಚನೆ ಬಗ್ಗೆ ಸೋಮವಾರ ನಿರ್ಧಾರ ಪ್ರಕಟ: ಕೇಜ್ರಿವಾಲ್
ನವದೆಹಲಿ: ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಎಎಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಮೊದಲು ಈ ಎರಡು ಪಕ್ಷಗಳಲ್ಲಿರುವ ಭ್ರಷ್ಟಾಚಾರಿಗಳನ್ನು ಜೈಲಿಗೆ ಹಾಕುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಾವು ಸರ್ಕಾರ ರಚನೆ ಮಾಡಿದರೆ, ಕಾಂಗ್ರೆಸ್ ಪಕ್ಷ ಮುಂದಿನ 6 ತಿಂಗಳುಗಳ ಕಾಲ ಕಿತಾಪತಿ ಮಾಡುವಂತಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅದೇ ವೇಳೆ ಸರ್ಕಾರ ರಚನೆ ಬಗ್ಗೆ ಸೋಮವಾರ ನಿರ್ಧಾರವನ್ನು ಪ್ರಕಟಿಸುತ್ತೇವೆ ಎಂದು ಹೇಳಿದ ಕೇಜ್ರಿವಾಲ್ ಸೋಮವಾರ 11 ಗಂಟೆಗೆ ಪತ್ರಿಕಾಗೋಷ್ಠಿ ಕರೆಯಲಿದ್ದಾರೆ.
ನಾವು ಸರ್ಕಾರ ರಚಿಸಿ ಚುನಾವಣಾ ಪ್ರಣಾಳಿಕೆಯಲ್ಲಿರುವ ಎಲ್ಲ ಕಾರ್ಯಗಳನ್ನು ಈಡೇರಿಸಲಾಗುವುದು ಎಂದು ಹೇಳಿದ್ದಾರೆ. ಏತನ್ಮಧ್ಯೆ, ನಾವು ಅಧಿಕಾರಕ್ಕೇರಿದರೆ ಲೋಕಪಾಲವನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

