ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅಸ್ವಸ್ಥ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು ಮಧ್ಯಾಹ್ನ ಇಳಯರಾಜ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚೆನ್ನೈನ ತಮ್ಮ ಖಾಸಗಿ ಸ್ಟುಡಿಯೋದಲ್ಲಿ ಸಿನಿಮಾವೊಂದರ ಸಂಗೀತ ನಿದೇರ್ಶನದಲ್ಲಿ ತೊಡಗಿದ್ದ ಸಂದರ್ಭದಲ್ಲಿಯೇ ಇಳಯರಾಜ ಅವರಿಗೆ ಎದೆನೋವು ಕಾಣಿಸಿಕೊಂಡಿತು ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಚಿತ್ರ ನಿರ್ದೇಶಕ ಮತ್ತು ಇಳಯರಾಜ ಅವರ ಸಂಬಂಧಿ ವೆಂಕಟಪ್ರಭು ಅವರು, 'ಇಳಿಯರಾಜ ಅವರು ತಮ್ಮ ಸ್ಟುಡಿಯೊದಲ್ಲಿಯೇ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಅಪೋಲೋ ಆಸ್ಪತ್ರೆ ದಾಖಲು ಮಾಡಲಾಗಿದೆ. ಅವರನ್ನು ವೈದ್ಯರು ಪರೀಕ್ಷಿಸಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇಂದು ಸಂಜೆ ಅಥವಾ ನಾಳೆ ಅವರನ್ನು ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


