ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರು ಸೋಮವಾರ ನಿಧನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಫೆಬ್ರುವರಿ 2, 1926ರಲ್ಲಿ ಜನಸಿದ ಜಿ.ಎಸ್. ಶಿವರುದ್ರಪ್ಪ ಅವರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಕುವೆಂಪು ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದ ಜಿ.ಎಸ್. ಶಿವರುದ್ರಪ್ಪ ಅವರನ್ನು ರಾಷ್ಟ್ರಕವಿ ಎಂದು ನವೆಂಬರ್ 1, 2006ರಂದು ಘೋಷಣೆ ಮಾಡಲಾಗಿತ್ತು.
1953ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಜೊತೆಗೆ ಚಿನ್ನದ ಪದಕ ಪಡೆದಿದ್ದ ಜಿ.ಎಸ್.ಶಿವರುದ್ರಪ್ಪ ಅವರು, 1989ರಲ್ಲಿ ಮೈಸೂರು ವಿವಿಯಲ್ಲೇ ಕನ್ನಡ ಅಧ್ಯಾಪಕ ವೃತ್ತಿಯನ್ನು ಆರಂಭಿಸಿದ್ದರು. ನಂತರ ತಮ್ಮ 'ಸೌಂದರ್ಯ ಸಮೀಕ್ಷೆ' ಎಂಬ ಗ್ರಂಥಕ್ಕೆ ಪಿಹೆಚ್ ಡಿ ಪದವಿ ಪಡೆದಿದ್ದರು.
ನಾಳೆ ಸರ್ಕಾರಿ ರಜೆ, ರಾಜ್ಯಾದ್ಯಂತ 2 ದಿನ ಶೋಕಾಚರಣೆ
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ನಿಧನದ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ರಾಷ್ಟ್ರಕವಿಯ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಡಿ.26ಕ್ಕೆ ಅಂತ್ಯಸಂಸ್ಕಾರ
ಡಾ. ಜಿ.ಎಸ್.ಶಿವರುದ್ರಪ್ಪ ಅವರ ಪುತ್ರ ಶಿವಪ್ರಸಾದ್ ಅವರು ಲಂಡನ್ನಲ್ಲಿ ನೆಲೆಸಿದ್ದು, ಅವರು ಬರುವವರೆಗೆ ಅಂತ್ಯಸಂಸ್ಕಾರ ನಡೆಸದಿರಲು ಕುಟುಂಬ ವರ್ಗ ನಿರ್ಧರಿಸಿದೆ. ಹೀಗಾಗಿ ಡಿಸೆಂಬರ್ 26ರಂದು ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೆ ಪಾರ್ಥಿವ ಶರೀರವನ್ನು ಕಿಮ್ಸ್ ಆಸ್ಪತ್ರೆಯ ಕೋಲ್ಡ್ ಸ್ಟೋರೇಜ್ನಲ್ಲಿಡಲು ನಿರ್ಧರಿಸಲಾಗಿದೆ.
ಅಂತ್ಯಕ್ರಿಯೆ ವೇಳೆ ಧಾರ್ಮಿಕ ವಿಧಿವಿಧಾನ ಬೇಡ ಎಂದಿದ್ದ ಜಿಎಸ್ಎಸ್
ನಾನು ಒಬ್ಬ ವಿಶ್ವಮಾನವ, ನಾನು ಯಾವುದೇ ಜಾತಿ, ಧರ್ಮಕ್ಕೆ ಸೇರಿದವನಲ್ಲ ಎಂದಿದ್ದ ಶಿವರುದ್ರಪ್ಪ ಅವರು, ತಮ್ಮ ಅಂತ್ಯಕ್ರಿಯೆ ವೇಳೆ ಯಾವುದೇ ವಿಧಿವಿಧಾನ ಅನುಸರಿಸಬೇಡಿ ಎಂದು ಸಾಯುವ ಮುನ್ನ ಕುಟುಂಬದವರಿಗೆ ಹೇಳಿರುವುದಾಗಿ ಅವರ ಕುಟುಂಬದ ಮೂಲಗಳು ತಿಳಿಸಿವೆ.
ಜಿ.ಎಸ್. ಶಿವರುದ್ರಪ್ಪ ಅವರಿಗೆ ಸಂದ ಗೌರವಗಳು
- 2010ರಲ್ಲಿ ಸಾಹಿತ್ಯ ಕಲಾಭೂಷಣ ಪ್ರಶಸ್ತಿ
- 1998ರಲ್ಲಿ ಪಂಪ ಪ್ರಶಸ್ತಿ
- 1984ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
- 1992ರಲ್ಲಿ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ
- 1966ರಲ್ಲಿ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ
- ಹಂಪಿ ವಿವಿಯಿಂದ ನಾಡೋಜ ಪ್ರಶಸ್ತಿ
- ಸೋವಿಯತ್ ಲ್ಯಾಂಡ್ ನೆಹರೂ ಪುರಸ್ಕಾರ
- ಗತಬಿಂಬ
- ಅನುರಣನ
- ಪ್ರತಿಕ್ರಿಯೆ
- ಕಾವ್ಯಾರ್ಥ ಚಿಂತನಾ
- ಸೌಂದರ್ಯ ಸಮೀಕ್ಷೆ
- ಪರಿಶೀಲನಾ
- ವಿಮರ್ಶೆಯ ಪೂರ್ವ ಪಶ್ಮಿಮ
- ಕನ್ನಡ ಸಾಹಿತ್ಯ ಸಮೀಕ್ಷೆ
- ಕನ್ನಡ ಕವಿಗಳ ಕಾವ್ಯ ಕಲ್ಪನೆ
- ಕಾಡಿನ ಕತ್ತಲಲ್ಲಿ
- ಪ್ರೀತಿ ಇಲ್ಲದ ಮೇಲೆ
- ಗೋಡೆ
- ತೀರ್ಥವಾಣಿ
- ಕಾರ್ತಿಕ
- ದೀಪದ ಹೆಜ್ಜೆ
- ಅನಾವರಣ
- ತೆರೆದ ಬಾಗಿಲು
- ಚಕ್ರಗಾತಿ
- ಮಾಸ್ಕೋದಲ್ಲಿ 22 ದಿನ
- ಇಂಗ್ಲೆಂಡ್ನಲ್ಲಿ ಚಾತುರ್ಮಾಸ
- ಅಮೆರಿಕದಲ್ಲಿ ಕನ್ನಡಿಗ
- ಗಂಗೆಯ ಶಿಖರಗಳಲ್ಲಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


