ಈಗಿನ ಸುದ್ದಿ

ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ

ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ
Published On :

ನವದೆಹಲಿ: ಸರ್ಕಾರ ರಚನೆಗೂ ಮುನ್ನವೇ ಆಮ್ ಆದ್ಮಿ ಪಕ್ಷ(ಎಎಪಿ)ದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡಿರುವ ಶಾಸಕರೊಬ್ಬರು, ನಾಳೆ ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಎಚ್ಚರಿಸಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎಎಪಿ ಶಾಸಕ ವಿನೋದ್ ಕುಮಾರ್ ಬಿನ್ನಿ ಅವರು, ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸಚಿವ ಸಂಪುಟದಲ್ಲಿ ತಮಗೆ ಸ್ಥಾನ ನೀಡದ ಪಕ್ಷದ ಧೋರಣೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಎಎಪಿ ಮುಖಂಡರ ಸಭೆಯಲ್ಲಿ ಶಾಸಕ ಬಿನ್ನಿ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಮನೀಶ್ ಸಿಸೋಡಿಯಾ, ರಾಖಿ ಬಿರ್ಲಾ, ಸೋಮನಾಥ್ ಭಾರತಿ, ಸತ್ಯೇಂದ್ರ ಜೈನ್, ಸೌರಭ್ ಭಾರದ್ವಾಜ್ ಹಾಗೂ ಗಿರೀಶ್ ಸೋನಿ ಅವರು ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಈ ಎಲ್ಲಾ ಶಾಸಕರು ಕೇಜ್ರಿವಾಲ್ ಅವರೊಂದಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.