ಈಗಿನ ಸುದ್ದಿ

ಕಲಾಗ್ರಾಮದಲ್ಲಿ ಜಿಎಸ್‌ಎಸ್ ಅಂತ್ಯ ಸಂಸ್ಕಾರ

ಕಲಾಗ್ರಾಮದಲ್ಲಿ ಜಿಎಸ್‌ಎಸ್ ಅಂತ್ಯ ಸಂಸ್ಕಾರ
Published On :

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ಆವರಣದಲ್ಲಿರುವ ಕಲಾಗ್ರಾಮದಲ್ಲಿ ರಾಷ್ಟ್ರಕವಿ ಜಿಎಸ್ ಶಿವರುದ್ರಪ್ಪ ಅವರ ಅಂತ್ಯ ಸಂಸ್ಕಾರ ನೇರವೇರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಶಿವರುದ್ರಪ್ಪ ಅವರ ಅಂತಿಮ ವಿಧಿ ವಿಧಾನವನ್ನು ಬೆಂಗಳೂರಿನಲ್ಲಿಯೇ ನೆರವೇರಿಸುವ ಕುರಿತು ಸಾಹಿತ್ಯ ಲೋಕದ ಹಲವು ಪ್ರಮುಖರು ಸಲಹೆ ನೀಡಿದ್ದು, ಇದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪ್ರಕಾಶ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಬೆಂಗಳೂರು ವಿಶ್ವ ವಿದ್ಯಾಲಯದ ಆವರಣದಲ್ಲಿರುವ ಕಲಾಗ್ರಾಮವನ್ನು ಪರಿಶೀಲಿಸಿ, ಕಲಾಗ್ರಾಮದಲ್ಲಿಯೇ ವಿಧಿ ವಿಧಾನ ನೆರವೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಬಳಿಕ ಪ್ರಕಾಶ್ ಅವರು ಜಿಎಸ್‌ಎಸ್ ಟ್ರಸ್ಟ್ ಸದಸ್ಯರು, ಜಿಎಸ್‌ಎಸ್ ಕುಟುಂಬ ಸದಸ್ಯರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳೊಂದಿಗೆ ವಿಧಿವಿಧಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

ಲಂಡನ್‌ನಲ್ಲಿರುವ ಶಿವರುದ್ರಪ್ಪ ಅವರ ಕಿರಿಯ ಮಗ ಡಾ.ಶಿವಪ್ರಸಾದ್ ಅವರು ಬಂದ ಬಳಿಕ ಅಂತಿಮ ವಿಧಿ ವಿಧಾನವನ್ನು ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಬನಶಂಕರಿಯಲ್ಲಿರುವ ಶಿವರುದ್ರಪ್ಪ ಅವರ ನಿವಾಸ 'ಚೈತ್ರ'ದಲ್ಲಿ ನಿನ್ನೆ ಸಂಜೆ 6 ಗಂಟೆಯವರೆಗೂ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ನಂತರ ಜಿಎಸ್‌ಎಸ್ ಪಾರ್ಥೀವ ಶರೀರವನ್ನು ಕಿಮ್ಸ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.