ನಿರಾಶ್ರಿತ ಶಿಬಿರದಲ್ಲಿರುವುದು ಕಾರ್ಯಕರ್ತರು: ಮುಲಾಯಂ ಸಿಂಗ್
ನವದೆಹಲಿ: ಮುಜಾಫರ ನಗರಲ್ಲಿರುವ ನಿರಾಶ್ರಿತ ಶಿಬಿರಗಳಲ್ಲಿರುವವರೆಲ್ಲರೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರು ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಮುಲಾಯಂ ಸಿಂಗ್ ಯಾದವ್ ಅವರು, ಮುಜಾಫರ ನಗರದಲ್ಲಿ ಯಾವುದೇ ನಿರಾಶ್ರಿತರಿಲ್ಲ. ಅಲ್ಲಿನ ಶಿಬಿರಗಳಲ್ಲಿರುವುದು ಕೇವಲ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು. ಸಮಾಜವಾದಿ ಪಕ್ಷದ ಮೇಲೆ ಗೂಬೆ ಕೂರಿಸಲು ಉಭಯ ಪಕ್ಷಗಳು ಹವಣಿಸುತ್ತಿವೆ. ಹೀಗಾಗಿಯೇ ಕೋಮು ಗಲಭೆಯ ಹೆಸರಿನಲ್ಲಿ ಉತ್ತರ ಪ್ರದೇಶದ ಸರ್ಕಾರಕ್ಕೆ ಮಸಿ ಬಳಿಯಲು ಯತ್ನಿಸಿವೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಿರಾಶ್ರಿತರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುತ್ತಿವೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಸರ್ಕಾರ, ಮುಜಾಫರ ನಗರದಲ್ಲಿ ಸ್ಥಾಪಿಸಲಾಗಿರುವ ನಿರಾಶ್ರಿತ ಶಿಬಿರಗಳಲ್ಲಿ ಯಾವುದೇ ನಿರಾಶ್ರಿತರಿಲ್ಲ. ಎಲ್ಲರನ್ನು ಅವರ ಸ್ವಪ್ರದೇಶಗಳಿಗೆ ಕಳುಹಿಸಿಕೊಡಲಾಗಿದೆ. ಈಗ ಅಲ್ಲಿ ಉಳಿದುಕೊಂಡಿರುವುದು ಕೇವಲ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎಂದು ಹೇಳಿತ್ತು.
ಆದರೆ ಉತ್ತರ ಪ್ರದೇಶ ಸರ್ಕಾರದ ಹೇಳಿಕೆಯನ್ನು ಪ್ರತಿಪಕ್ಷಗಳು ಟೀಕಿಸಿದ್ದವು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಜೆಪಿ ಉಪಾಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಅವರು, ಮುಲಾಯಂ ಸಿಂಗ್ ಯಾದವ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜವಾದಿ ಪಕ್ಷ ಜವಾಬ್ದಾರಿಯಿಂದ ನುಣಿಚಿಕೊಳ್ಳಲು ಸಾಧ್ಯವಿಲ್ಲ. ಮುಲಾಯಂ ಸಿಂಗ್ ಯಾದವ್ ಅವರದು ಕೇವಲ ರಾಜಕೀಯ ನಾಟಕ. ಒಂದು ವೇಳೆ ಅಲ್ಲಿರುವುದು ರಾಜಕೀಯ ಪಕ್ಷಗಳ ಕಾರ್ಯಕರ್ತರೇ ಆಗಿದ್ದರೆ ಅಂತಹರನ್ನು ಗುರುತಿಸಿ, ಮೂಲ ನಿರಾಶ್ರಿತರಿಗೆ ಸಹಾಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯವೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

