ಮೊಯ್ಲಿಗೆ ಪರಿಸರ ಮತ್ತು ಅರಣ್ಯ ಇಲಾಖೆಯ ಜವಾಬ್ದಾರಿ

ನವದೆಹಲಿ: ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರಿಗೆ ಹೆಚ್ಚುವರಿ ಖಾತೆಯನ್ನು ವಹಿಸಲಾಗಿದ್ದು, ಇತ್ತೀಚೆಗಷ್ಟೇ ತೆರವಾಗಿದ್ದ ಪರಿಸರ ಮತ್ತು ಅರಣ್ಯ ಇಲಾಖೆಯ ಜವಾಬ್ದಾರಿಯನ್ನು ಮೊಯ್ಲಿ ಅವರಿಗೆ ನೀಡಲಾಗಿದೆ.
ಪ್ರಸ್ತುತ ಪೆಟ್ರೋಲಿಯಂ ಖಾತೆ ನಿರ್ವಹಿಸುತ್ತಿರ ಸಚಿವ ವೀರಪ್ಪ ಮೊಯ್ಲಿ ಅವರಿಗೆ ಪ್ರಧಾನಿ ಮನಮೋಹನ್ ಸಿಂಗ್ ಅವರು ನೂತನ ಜವಾಬ್ದಾರಿ ನೀಡಿದ್ದು, ಜಯಂತಿ ನಟರಾಜನ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಪರಿಸರ ಮತ್ತು ಅರಣ್ಯ ಇಲಾಖೆಯ ಖಾತೆಯನ್ನು ಮೊಯ್ಲಿ ಅವರಿಗೆ ನೀಡಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವೀರಪ್ಪ ಮೊಯ್ಲಿ ಅವರು ತಮ್ಮ ನೂತನ ಖಾತೆಯ ಅಧಿಕಾರ ಸ್ವೀಕರಿಸಿದ್ದಾರೆ.
ಸಮಾರಂಭದ ಬಳಿಕ ಮಾತನಾಡಿದ ಅವರು, 'ತಮಗೆ ನೀಡಿರುವ ಹೆಚ್ಚುವರಿ ಖಾತೆಯಿಂದಾಗಿ ಯಾವುದೇ ಹೊರೆಯಾಗುವುದಿಲ್ಲ. ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದರು. ಅಲ್ಲದೆ ಬಾಕಿ ಉಳಿದಿರುವ ಕಡತಗಳನ್ನು ಶೀಘ್ರ ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳುವುದಿಲ್ಲ. ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ಅಂತೆಯೇ ಇಲಾಖೆಗಿರುವ 'ಹಸಿರು' ಇಮೇಜ್ ಧಕ್ಕೆ ತರುವುದಿಲ್ಲ' ಎಂದು ಅವರು ಭರವಸೆ ನೀಡಿದ್ದಾರೆ.
2014ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಕಳೆದ ಶನಿವಾರ ಪರಿಸರ ಮತ್ತು ಅರಣ್ಯ ಇಲಾಖೆ ಖಾತೆಯನ್ನು ನಿರ್ವಹಿಸುತ್ತಿದ್ದ ಜಯಂತಿ ನಟರಾಜನ್ ಅವರ ರಾಜಿನಾಮೆ ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


