ಈಗಿನ ಸುದ್ದಿ

ರಾಹುಲ್ ಗಾಂಧಿಯೇ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ: ಮೊಯ್ಲಿ

ರಾಹುಲ್ ಗಾಂಧಿಯೇ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ: ಮೊಯ್ಲಿ
Published On :

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಇಂಧನ, ಪರಿಸರ ಮತ್ತು ಅರಣ್ಯ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಹೆಚ್ಚುವರಿಯಾಗಿ ಪರಿಸರ ಮತ್ತು ಅರಣ್ಯ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೊಯ್ಲಿ, ರಾಹುಲ್‌ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದರು. ಅಲ್ಲದೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಂಯತಿ ನಟರಾಜನ್ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಹೇಳಿ, ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಇದೇ ವೇಳೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ಮೋದಿ ಅವರು ಕೇವಲ ಮಾತನಾಡುತ್ತಾರೆ ಹೊರತು ಕೆಲಸ ಮಾಡುವುದಿಲ್ಲ. ಆದರೆ ತಾವು ಮಾತನಾಡದೇ ಹೆಚ್ಚು ಕೆಲಸ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.