ಈಗಿನ ಸುದ್ದಿ

ಸೋನಿಯಾ, ರಾಹುಲ್ ವಿರುದ್ಧ 'ಯೋಗಗುರು' ಪ್ರಚಾರ

ಸೋನಿಯಾ, ರಾಹುಲ್ ವಿರುದ್ಧ 'ಯೋಗಗುರು' ಪ್ರಚಾರ
Published On :

ಲಖ್ನೋ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಪ್ರಚಾರ ಮಾಡುವುದಾಗಿ ಯೋಗಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಲಖ್ನೋದಲ್ಲಿ ನಡೆದ ಯೋಗಶಿಬಿರದಲ್ಲಿ ಮಾತನಾಡಿದ ಬಾಬಾರಾಮ್ ದೇವ್ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. 'ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಯುಪಿಎ ಸರ್ಕಾರದ ಭ್ರಷ್ಟಾಚಾರದ ಕುರಿತು ನಾನು ಜಾಗೃತಿ ಅಭಿಯಾನ ಆರಂಭಿಸುತ್ತೇನೆ. ಆ ಮೂಲಕ ಅವರು ಚುನಾವಣೆಯಲ್ಲಿ ಸೋಲು ಕಾಣುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಪರವಾಗಿ ರಾಮ್‌ದೇವ್ ಅವರು ಪ್ರಚಾರ ಮಾಡಲಿದ್ದು, ಅವರಿಗೆ ಶುಭಾಶಯ ಕೋರಿದ್ದಾರೆ. 'ದೇಶದ ಜನರಿಗೆ ನರೇಂದ್ರ ಮೋದಿ ಅವರಲ್ಲಿ ಬಹಳ ನಂಬಿಕೆ ಇದ್ದು, ಅವರೇ ಮುಂದಿನ ಪ್ರಧಾನಿಯಾಗಲಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಎಲ್ಲ 300 ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿ ಭಾರಿಸುವ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎನ್ನುವುದು ನನ್ನ ಅಭಿಲಾಷೆ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಇದೇ ವೇಳೆ ತಾವು ರಾಜಕೀಯಕ್ಕೆ ಧುಮುಕುವ ಕುರಿತು ಸ್ಫಷ್ಟನೆ ನೀಡಿರುವ ಬಾಬಾ ರಾಮ್‌ದೇವ್ ಅವರು, ನಾನು ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ. ಅಂತೇಯೇ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.