ನಾರಿಮನ್ ಜೊತೆ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ರಾಯಚೂರು: ಕೃಷ್ಣ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರ ವಕೀಲ ನಾರಿಮನ್ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಯಚೂರಿನ ಮಾನ್ವಿ ತಾಲ್ಲೂಕಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಪಟ್ಟಂತೆ ನ್ಯಾಯಾಲಯ ತೀರ್ಪುನೀಡಿದೆ. ನ್ಯಾಯಾಲಯದ ಆದೇಶದಂತೆ ಕರ್ನಾಟಕದ ಪಾಲಿನ ನೀರನ್ನು ಸದ್ಭಳಕೆ ಮಾಡಿಕೊಳ್ಳುತ್ತೇವೆ. ನ್ಯಾಯಾಧಿಕರಣದ ತೀರ್ಪಿನ ವಿರುದ್ಧ ಆಂಧ್ರ ಪ್ರದೇಶ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕದ ಪರ ವಕೀಲ ಫಾಲಿ ನಾರಿಮನ್ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಕಳೆದ ಬಾರಿಯೇ ಅವರನ್ನು ಭೇಟಿ ಮಾಡಬೇಕೆಂದುಕೊಂಡಿದ್ದೆ.
ಆದರೆ ಅವರು ನಮಗೆ ಸಿಗಲಿಲ್ಲ. ಹೀಗಾಗಿ ಶೀಘ್ರದಲ್ಲಿಯೇ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದೇನೆ. ಯಾವುದೇ ಕಾರಣಕ್ಕೂ ರಾಜ್ಯದ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಬಿಜೆಪಿಗೆ ಮುಖವಿಲ್ಲ, ಮೋದಿ ಪ್ರಧಾನಿಯಾಗಲ್ಲ
ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ತಮ್ಮ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಹೀಗಾಗಿ ಮತ್ತೆ ಜನರ ಮುಂದೆ ಹೋಗಲು ಅವರಿಗೆ ಮುಖವಿಲ್ಲ. ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಲಿದೆ.
ದೇಶದ ಪ್ರಧಾನಿಯಾಗುವ ಕನಸು ಕಾಣುತ್ತಿರುವ ಮೋದಿ ಅವರ ಕನಸು ಕನಸಾಗಿಯೇ ಉಳಿಯಲಿದೆ. ಅವರು ಪ್ರಧಾನಿಯಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


